ಬೈಕ್ ಮರಕ್ಕೆ ಡಿಕ್ಕಿ ಹೊಡೆದು ಸವಾರನ ದಾರುಣ ಸಾವು

06/10/2022
ಬೆಳ್ತಂಗಡಿ: ನಾರಾವಿ ಅರಸಿಕಟ್ಟೆ ಎಂಬಲ್ಲಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.
ನಾರಾವಿ ಗ್ರಾಮದ ಅರಸಿಕಟ್ಟೆ ನಿವಾಸಿ ಸಂತೋಷ್ (23 )ಎಂಬವರೇ ಮೃತ ವ್ಯಕ್ತಿಯಾಗಿದ್ದಾರೆ.
ರಾತ್ರಿಯ ವೇಳೆ ಮನೆ ಸಮೀಪದ ಅಂಗಡಿಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸವಾರನ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಇವರನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆವೇಳೆಗೆ ಅವರು ಮೃತಪಟ್ಟಿದ್ದರು. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka