ನೀವು ಅದೃಷ್ಟವಂತರು ಕಾಂಗ್ರೆಸ್ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆ ಕೇಳಬಹುದು: ಬಿಜೆಪಿಗೆ ರಾಹುಲ್ ಟಾಂಗ್ - Mahanayaka
10:32 AM Wednesday 10 - December 2025

ನೀವು ಅದೃಷ್ಟವಂತರು ಕಾಂಗ್ರೆಸ್ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆ ಕೇಳಬಹುದು: ಬಿಜೆಪಿಗೆ ರಾಹುಲ್ ಟಾಂಗ್

rahulgandhi
08/10/2022

ತುಮಕೂರು:  ನೀವು ಅದೃಷ್ಟವಂತರು ಯಾಕೆಂದ್ರೆ ಇದು ಕಾಂಗ್ರೆಸ್ ಪತ್ರಿಕಾಗೋಷ್ಠಿ. ಬಿಜೆಪಿಯ ಪತ್ರಿಕಾಗೋಷ್ಠಿಯಲ್ಲಿ ನಿಮಗೆ ಪ್ರಶ್ನೆ ಕೇಳುವ ಅವಕಾಶಗಳಿರುವುದಿಲ್ಲ ಎಂದು ಕಾಂಗ್ರೆಸ್ ನಾಯಕ  ರಾಹುಲ್ ಗಾಂಧಿ ಹೇಳಿದರು.

ಭಾರತ್ ಜೋಡೋ ಯಾತ್ರೆ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಆರ್ ಎಸ್ ಎಸ್ ನವರು ಎಲ್ಲಿಯೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯೇ ಆಗಿಲ್ಲ. ಆರೆಸ್ಸೆಸ್ ಬ್ರಿಟೀಷರಿಗೆ ಸಹಾಯ ಮಾಡುತ್ತಿತ್ತು. ಸಾವರ್ಕರ್ ಅವರು ಬ್ರಿಟೀಷರಿಂದ ಸ್ಟೈಫಂಡ್ ಪಡೆದುಕೊಳ್ಳುತ್ತಿದ್ದರು. ಇಂದು ಭಾರತವನ್ನು ಬಿಜೆಪಿ ಒಡೆಯುತ್ತಿದೆ. ನಾವು ದ್ವೇಷ ಹರಡುವವರ ವಿರುದ್ಧ ಹೋರಾಡುತ್ತೇವೆ ಎಂದರು.

ಇನ್ನೂ ಪಕ್ಷದ ನಾಯಕರು ಒಗ್ಗಟ್ಟು ಕಾಯ್ದುಕೊಳ್ಳಬೇಕು ಎಂದು ಪಕ್ಷದ ನಾಯಕರಿಗೆ ಸಲಹೆ ನೀಡಿದ  ಅವರು, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಕುರಿತ ಹೊಂದಾಣಿಕೆ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಅದರ ಅಗತ್ಯ ಬೀಳೂವುದಿಲ್ಲ, ನಾವು ಚುನಾವಣೆ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ