ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ನಿಧನ - Mahanayaka
8:46 PM Wednesday 20 - August 2025

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ನಿಧನ

mulayam singh yadav
10/10/2022


Provided by

ಲಕ್ನೋ: ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಕೊನೆಯುಸಿರೆಳೆದಿದ್ದಾರೆ.

ಅವರಿಗೆ 82 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ವಾರಗಳಲ್ಲಿ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇದೀಗ ಮುಲಾಯಂ ಸಿಂಗ್ ಯಾದವ್ ಅವರ ನಿಧನದ ವಾರ್ತೆಯನ್ನು ಅವರ ಪುತ್ರ ಅಖಿಲೇಶ್ ಯಾದವ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

“ಮೇರೆ ಅದಾರನಿಯ ಪಿತಾಜಿ ಔರ್ ಸಬ್ಕೆ ನೇತಾಜಿ ನಹೀ ರಹೇ  ಎಂದು ಅಖಿಲೇಶ್ ಯಾದವ್ ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ.  ಇನ್ನೂ ಪ್ರಧಾನಿ ಮೋದಿಯವರು ಮುಲಾಯಂ ಸಿಂಗ್ ಯಾದವ್ ಅವರ ಜೊತೆಗಿನ ತಮ್ಮ ಸ್ನೇಹವನ್ನು ನೆನಪಿಸಿಕೊಂಡು ಟ್ವೀಟ್ ಮಾಡಿದ್ದು, ಮುಲಾಯಂ ಸಿಂಗ್ ಯಾದವ್ ಅವರು ಗಮನಾರ್ಹ ವ್ಯಕ್ತಿತ್ವ ಹೊಂದಿದ್ದು, ಜನರ ಸಮಸ್ಯೆಗಳ ಬಗ್ಗೆ ಸಂವೇದನಾಶೀಲರಾಗಿದ್ದರು. ವಿನಮ್ರ ಹಾಗೂ  ನೆಲದ ನಾಯಕರಾಗಿ ವ್ಯಾಪಕ ಮೆಚ್ಚುಗೆ ಪಡೆದಿದ್ದರು ಎಂದು ಪ್ರಧಾನಿ ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ