ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ 15 ಜನರು ಮರಳಿ ಹಿಂದೂ ಧರ್ಮಕ್ಕೆ
ತುಮಕೂರು: ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ 15 ಜನರು ಹಿಂದೂ ಧರ್ಮಕ್ಕೆ ಮತ್ತೆ ಮರಳಿದ ಘಟನೆ ಜಿಲ್ಲೆಯ ಶಿರಾ ತಾಲೂಕಿನ ನೆಲಗುಂಡನಹಟ್ಟಿ ಗ್ರಾಮದಲ್ಲಿ ನಡೆದಿದೆ.
ಎಸ್ ಸಿ ಪ್ರಮಾಣ ಪತ್ರ ಹೊಂದಿದ್ದ ಸುಮಾರು 35 ಕುಟುಂಬದ 68 ಜನರು ಕೆಲವು ವರ್ಷಗಳ ಹಿಂದೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು ಎನ್ನಲಾಗಿದೆ. ಇದೀಗ ಈ ಪೈಕಿ 15 ಜನರನ್ನು ಆಣೆ ಪ್ರಮಾಣ ಮಾಡಿಸಿ ಹಿಂದೂ ಧರ್ಮಕ್ಕೆ ಕರೆತರಲಾಗಿದೆ. ನವಭಾರತ ಹಿಂದೂ ದಲಿತ ಸಂಘ ಘರ್ ವಾಪಸಿ ಮಾಡಿದೆ ಎಂದು ವರದಿಯಾಗಿದೆ.
ಮೂಲಭೂತ ಸೌಲಭ್ಯವಿಲ್ಲದೇ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಮೂಲಭೂತ ಸೌಲಭ್ಯ ನೀಡುವ ಆಮಿಷವೊಡ್ಡಿ ಮತಾಂತರ ಮಾಡಲಾಗಿತ್ತು ಅನ್ನೋ ಆರೋಪಗಳು ಕೇಳಿ ಬಂದಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka




























