ಗುಜರಾತ್ ನಲ್ಲಿ ಸೇತುವೆ ಕುಸಿತ: ಮೃತರ ಸಂಖ್ಯೆ132ಕ್ಕೆ ಏರಿಕೆ - Mahanayaka
12:50 AM Thursday 18 - September 2025

ಗುಜರಾತ್ ನಲ್ಲಿ ಸೇತುವೆ ಕುಸಿತ: ಮೃತರ ಸಂಖ್ಯೆ132ಕ್ಕೆ ಏರಿಕೆ

morbi bridge collapse
31/10/2022

ಗುಜರಾತ್ ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯ ಸೇತುವೆ ಕುಸಿದು ಬಿದ್ದ ಪರಿಣಾಮ 132 ಜನರು ಸಾವನ್ನಪ್ಪಿದ್ದು, 177 ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ.

ಸೇನೆ, ನೌಕಾಪಡೆ, ವಾಯುಪಡೆ, ಎನ್‌ ಡಿಆರ್‌ಎಫ್, ಅಗ್ನಿಶಾಮಕ ದಳ ನಿರಂತರ ಕಾರ್ಯಾಚರಣೆ ಮೂಲಕ ಜನರ ರಕ್ಷಣೆಗೆ ಕಾರ್ಯಾಚರಣೆ ನಡೆಸುತ್ತಿದೆ.

ದುರಂತ ಸಂಭವಿಸುತ್ತಿದ್ದಂತೆಯೇ ಕೂಡಲೇ ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಇದಲ್ಲದೇ ಬೇರೆ ಕಡೆಯಿಂದಲೂ ರಕ್ಷಣಾ ಪಡೆಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಗೆ ಕೈಜೋಡಿಸಿದರು.

ಆರೋಗ್ಯ ಕೇಂದ್ರಗಳಾದ, ರಾಜ್‌ಕೋಟ್ ಪಿಡಿಯು ಆಸ್ಪತ್ರೆ ಮತ್ತು ಸುರೇಂದ್ರನಗರ ಸಿವಿಲ್ ಆಸ್ಪತ್ರೆಯ ಸುಮಾರು 40 ವೈದ್ಯರು ಗಾಯಾಳುಗಳಿಗೆ ಮೊರ್ಬಿ ಸಿವಿಲ್ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಯನ್ನು ನೀಡುತ್ತಿದ್ದಾರೆ ಎಂದು ಇಲ್ಲಿನ ಜಿಲ್ಲಾಡಳಿತ ತಿಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ