ದೊಡ್ಡ ನಟರು 50 ವರ್ಷದಲ್ಲಿ ಸಾಧಿಸಿದ್ದನ್ನು ಪುನೀತ್ 20 ವರ್ಷದಲ್ಲಿ ಸಾಧಿಸಿದ್ದರು: ರಜನಿಕಾಂತ್ - Mahanayaka
4:10 AM Wednesday 20 - August 2025

ದೊಡ್ಡ ನಟರು 50 ವರ್ಷದಲ್ಲಿ ಸಾಧಿಸಿದ್ದನ್ನು ಪುನೀತ್ 20 ವರ್ಷದಲ್ಲಿ ಸಾಧಿಸಿದ್ದರು: ರಜನಿಕಾಂತ್

karnataka rathna
01/11/2022


Provided by

ಬೆಂಗಳೂರು:  ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ, ಗಣ್ಯರ ಸಮ್ಮುಖದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಡಾ.ಸುಧಾಮೂರ್ತಿ ಅವರು ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಟ ರಜನಿಕಾಂತ್, ಅಪ್ಪು ಸಾಧಾರಣ ವ್ಯಕ್ತಿಯಲ್ಲ, ಆತ ಅಪಾರವಾದದ್ದನ್ನು ಸಾಧಿಸಿದ್ದಾರೆ. ಕಲಿಯುಗಕ್ಕೆ ಪುನೀತ್ ದೇವರ ಮಗು, ನಚಿಕೆತ, ಮಾರ್ಕಾಂಡೇಯರ ಸಾಲಿಗೆ ಸೇರುತ್ತಾರೆ ಎಂದ ಅವರು, ಎನ್ ಟಿಆರ್, ಎಂಜಿಆರ್, ಶಿವಾಜಿಗಣೇಶನ್, ರಾಜ್ ಕುಮಾರ್ ಅವರು 50 ವರ್ಷದಲ್ಲಿ ಸಾಧಿಸಿದ್ದನ್ನು ಅಪ್ಪು 20  ವರ್ಷಗಳಲ್ಲಿ ಸಾಧಿಸಿದ್ದರು. ಕೇವಲ ನಟನೆಯಿಂದಷ್ಟೇ ಜನರನ್ನು ಗೆಲ್ಲಲು ಸಾಧ್ಯವಿಲ್ಲ. ಆದರ್ಶಗಳ ಮೂಲಕ ಗೆಲ್ಲಬಹುದು ಅನ್ನೋದನ್ನು ಅಪ್ಪು ತೋರಿಸಿದ್ದಾರೆ ಎಂದು ಅವರು  ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜೂನಿಯರ್ ಎನ್ ಟಿಆರ್  ಮಾತನಾಡಿ,  ಸ್ವಂತ ವ್ಯಕ್ತಿತ್ವದಿಂದ ನಗುವಿನಿಂದಲೇ ಒಂದು ರಾಜ್ಯ ಗೆದ್ದ ರಾಜ ಪುನೀತ್ ರಾಜ್ ಕುಮಾರ್, ಅವರು ಎಲ್ಲಕ್ಕೂ ಮಿಗಿಲಾಗಿ ಶ್ರೇಷ್ಠ ವ್ಯಕ್ತಿತ್ವದವರಾಗಿದ್ದರು. ಈ ಕಾರ್ಯಕ್ರಮದಲ್ಲಿ ಹೆಮ್ಮೆಯ ಗೆಳೆಯನಾಗಿ ನಿಂತಿದ್ದೇನೆ, ಈ ಅವಕಾಶ ನೀಡಿದ್ದಕ್ಕೆ ಸರ್ಕಾರಕ್ಕೆ, ಡಾ. ರಾಜ್ ಕುಟುಂಬಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿರುವುದು “ನನ್ನ ಪುಣ್ಯ ಭಾಗ್ಯ, ಸರ್ಕಾರದ ಪುಣ್ಯಭಾಗ್ಯ, ಸೌಭಾಗ್ಯ ಸಿಕ್ಕಿದೆ ಎಂದು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ