ಹುಲಿಗಳ ಮಧ್ಯೆ ನಡೆದ ಕಚ್ಚಾಟದಲ್ಲಿ ಗಾಯಗೊಂಡಿದ್ದ ಪಿಲಿಕುಳದ ಹುಲಿ ಮರಿ ಸಾವು - Mahanayaka

ಹುಲಿಗಳ ಮಧ್ಯೆ ನಡೆದ ಕಚ್ಚಾಟದಲ್ಲಿ ಗಾಯಗೊಂಡಿದ್ದ ಪಿಲಿಕುಳದ ಹುಲಿ ಮರಿ ಸಾವು

pilikula
14/11/2022

ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹುಲಿಗಳ ಮಧ್ಯೆ ನಡೆದ ಕಚ್ಚಾಟದಲ್ಲಿ ಗಾಯಗೊಂಡಿದ್ದ ಸುಮಾರು ಎರಡೂವರೆ ವರ್ಷ ಪ್ರಾಯದ ಹುಲಿಮರಿಯೊಂದು ಮೃತಪಟ್ಟಿದೆ.

ಇದರೊಂದಿಗೆ ಪಿಲಿಕುಳದಲ್ಲಿ ಹುಲಿಗಳ ಸಂಖ್ಯೆ 11ಕ್ಕಿಳಿದಿದೆ. ಕೆಲ ಸಮಯದ ಹಿಂದೆ ಹುಲಿಗಳ ನಡುವಿನ ಕಚ್ಚಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹುಲಿಮರಿಗೆ ಜೈವಿಕ ಉದ್ಯಾನವನದ ವೈದ್ಯಾಧಿಕಾರಿ ವಿಷ್ಣು ದತ್, ಮಧುಸೂಧನ ಮತ್ತು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದು, ಅದು ಚೇತರಿಸಿಕೊಂಡು ಸಹಜ ಸ್ಥಿತಿಗೆ ಮರಳಿತ್ತು.

ಆದರೆ ಕಳೆದ ಶುಕ್ರವಾರ ಮಧ್ಯಾಹ್ನ ಹುಲಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಈ ವೇಳೆ ವೈದ್ಯಾಧಿಕಾರಿಗಳು ಶುಶ್ರೂಷೆ ನಡೆಸಿದರೂ ಫಲಕಾರಿಯಾಗದೇ ಅದು ಅಸುನೀಗಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕರು ತಿಳಿಸಿದ್ದಾರೆ.

ಸಾವನ್ನಪ್ಪಿದ ಹುಲಿ ಮರಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಈ ವೇಳೆ ಕಿಡ್ನಿ ಮತ್ತು ಅಂಗಾಂಗಳ ವೈಫಲ್ಯ ಕಂಡು ಬಂದಿದೆ. ಅಸುನೀಗಿದ ಹುಲಿಯ ಅಂಗಾಂಗಗಳ ಮಾದರಿಯನ್ನು ಉತ್ತರ ಪ್ರದೇಶದ ಐ.ವಿ.ಆರ್.ಐ., ಬರೇಲಿ ಮತ್ತು ಬೆಂಗಳೂರಿನ ಐ.ಎ. ಎಚ್. ಆ್ಯಂಡ್ ವಿ.ಬಿ. ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಈ ಹುಲಿ ಮರಿಯು ಪಿಲಿಕುಳದಲ್ಲೇ ಜನಿಸಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ