ಸಿಡಿಲು ಬಡಿದು 16 ವರ್ಷದ ಬಾಲಕ ದುರ್ಮರಣ - Mahanayaka
7:11 PM Saturday 24 - January 2026

ಸಿಡಿಲು ಬಡಿದು 16 ವರ್ಷದ ಬಾಲಕ ದುರ್ಮರಣ

karthik
15/11/2022

ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಸಾಣೂರು ಪದವು ಎಂಬಲ್ಲಿ ನಡೆದಿದೆ.

ಸಾಣೂರುಪದವು ಗಣೇಶ್ ಆದಿದ್ರಾವಿಡ ಎಂಬವರ ಪುತ್ರ ಕಾರ್ತಿಕ್ (16) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ 9ರ ಸುಮಾರಿಗೆ ಊಟ ಮುಗಿಸಿ ಮಲಗಿದ್ದ ವೇಳೆ ಸಿಡಿಲು ಬಡಿದು ಕಾರ್ತಿಕ್ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸಿಡಿಲು ಬಡಿದು ಪ್ರಜ್ಞಾಹೀನನಾಗಿದ್ದ ಕಾರ್ತಿಕ್ ನನ್ನು ತಕ್ಷಣವೇ ಕೈಕಂಬ ಕ್ಲಿನಿಕ್ ಗೆ ಸಾಗಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಕಾರ್ತಿಕ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.  ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ