ಭೀಮಾ ಕೋರೆಗಾಂವ್ ಪ್ರಕರಣ: ದಲಿತ ಚಿಂತರ ಆನಂದ್ ತೇಲ್ತುಂಬೆಗೆ ಜಾಮೀನು - Mahanayaka

ಭೀಮಾ ಕೋರೆಗಾಂವ್ ಪ್ರಕರಣ: ದಲಿತ ಚಿಂತರ ಆನಂದ್ ತೇಲ್ತುಂಬೆಗೆ ಜಾಮೀನು

anand teltumbde
18/11/2022


Provided by

ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷದ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಐಐಟಿಯ ಮಾಜಿ ಪ್ರಾಧ್ಯಾಪಕ ಮತ್ತು ದಲಿತ ಚಿಂತಕ ಆನಂದ್ ತೆಲ್ತುಂಬೆ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ವಿಶೇಷ ಎನ್ ಐಎ ನ್ಯಾಯಾಲಯ ತನ್ನ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದರ ವಿರುದ್ಧ ಆನಂದ್ ತೇಲ್ತುಂಬೆ ಕಳೆದ ವರ್ಷ ಹೈಕೋರ್ಟ್ ಮೊರೆ ಹೋಗಿದ್ದರು.

ಈ ಪ್ರಕರಣವು 2017ರ ಡಿಸೆಂಬರ್ 31ರಂದು ಪುಣೆಯ ಶನಿವಾರವಾಡದಲ್ಲಿ ನಡೆದ ಎಲ್ಗಾರ್ ಪರಿಷದ್ ಸಮಾವೇಶದಲ್ಲಿ ಮಾಡಿದ ಪ್ರಚೋದನಕಾರಿ ಭಾಷಣಗಳಿಗೆ ಸಂಬಂಧಿಸಿದೆ. ಸಮಾವೇಶದ ಮರುದಿನ ನಗರದ ಹೊರವಲಯದಲ್ಲಿರುವ ಭೀಮಾ ಕೋರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ