ಪ್ರತಿಭಾ ಕುಳಾಯಿ ನಳಿನ್ ಕುಮಾರ್ ಕಟೀಲ್ ಅವರನ್ನು ಅವಹೇಳನ ಮಾಡಿರುವುದು ಖಂಡನೀಯ: ಪೂಜಾ ಪೈ - Mahanayaka

ಪ್ರತಿಭಾ ಕುಳಾಯಿ ನಳಿನ್ ಕುಮಾರ್ ಕಟೀಲ್ ಅವರನ್ನು ಅವಹೇಳನ ಮಾಡಿರುವುದು ಖಂಡನೀಯ: ಪೂಜಾ ಪೈ

bjp
18/11/2022


Provided by

ಸುರತ್ಕಲ್ ಟೋಲ್ ಗೇಟ್‌ ಗೆ ಸಂಬಂಧಿಸಿ ಹೋರಾಟ ಮಾಡುತ್ತಿರುವ ಡಿವೈಎಫ್ ಐಗೆ ಬೆಂಬಲ ಸೂಚಿಸಿ ಮಾತನಾಡಿದ ಮಂಗಳೂರು ನಗರ ಪಾಲಿಕೆ ಮಾಜಿ ಸದಸ್ಯೆ ಪ್ರತಿಭಾ ಕುಳಾಯಿ ಅವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಅವಹೇಳನ ಮಾಡಿದ್ದಾರೆ. ಇದು ಖಂಡನೀಯ ಎಂದು ಬಿಜೆಪಿ ಜಿಲ್ಲಾ ಘಟಕ ಹೇಳಿದೆ. ಮಂಗಳೂರಲ್ಲಿ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾರ್ಯದರ್ಶಿ ಪೂಜಾ ಪೈ ಅವರು ‘ಪಾಲಿಕೆಯ ವಾರ್ಡ್‌ನಲ್ಲಿ ಎರಡನೇ ಬಾರಿ ಗೆಲ್ಲಲು ಸಾಧ್ಯವಾಗದ  ಪ್ರತಿಭಾ ಕುಳಾಯಿ, ಜಿಲ್ಲೆಗೆ ₹20 ಸಾವಿರ ಕೋಟಿ ಮೊತ್ತದ ಅನುದಾನ ತಂದಿರುವ ಸಂಸದರನ್ನು ಸಾರ್ವಜನಿಕವಾಗಿ ನಿಂದಿಸಿದ್ದಾರೆ. ಇದು ಅವರು ಪ್ರತಿನಿಧಿಸುತ್ತಿರುವ ಪಕ್ಷದ ಕೀಳುಮಟ್ಟದ ರಾಜಕೀಯವನ್ನು ಬಿಂಬಿಸುತ್ತದೆ. ಇಂಥ ಪ್ರವೃತ್ತಿಯನ್ನು ಆ ಪಕ್ಷ ಮತ್ತು ಪ್ರತಿಭಾ ಅವರು ನಿಲ್ಲಿಸಬೇಕು’ ಎಂದರು.

ಇನ್ನು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ ‘ನವದೆಹಲಿಯಲ್ಲಿ ಲವ್‌ ಜಿಹಾದ್ ಮೂಲಕ ಹಿಂದೂ ಯುವತಿಯನ್ನು ಬಲೆಗೆ ಬೀಳಿಸಿ ಕೊಂದು 35 ತುಂಡು ಮಾಡಿದಾತನನ್ನು ಗಲ್ಲಿಗೇರಿಸಬೇಕು‘ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ