ಮಂಗಳೂರಿನಲ್ಲಿ ಸ್ಫೋಟ: ಕರಾವಳಿಯ ಜನತೆಯನ್ನು ಬೆದರಿಸುವ ಕೃತ್ಯವಾಗಿದೆ: ಶರಣ್ ಪಂಪ್’ವೆಲ್ - Mahanayaka

ಮಂಗಳೂರಿನಲ್ಲಿ ಸ್ಫೋಟ: ಕರಾವಳಿಯ ಜನತೆಯನ್ನು ಬೆದರಿಸುವ ಕೃತ್ಯವಾಗಿದೆ: ಶರಣ್ ಪಂಪ್’ವೆಲ್

sharan pumpwell
20/11/2022


Provided by

ಮಂಗಳೂರಿನಲ್ಲಿ ಬಾಂಬ್  ಸ್ಫೋಟ ಪ್ರಕರಣವು   ಕರಾವಳಿಯ ಜನತೆಯನ್ನು ಬೆದರಿಸುವ ಕೃತ್ಯವಾಗಿದೆ. ಈ ಘಟನೆ ನಮಗೆ ಸವಾಲೆಸದಂತಾಗಿದೆ. ಈ ಉಗ್ರ ಕೃತ್ಯದ ವಿರುದ್ಧ ಕರಾವಳಿಯ ಜನತೆ ಎಚ್ಚೆತ್ತುಕೊಂಡು ಭಯೋತ್ಪಾದಕರ ಸವಾಲುಗಳನ್ನು ಎದುರಿಸಲು ತಯಾರಾಗಬೇಕಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್’ವೆಲ್ ಹೇಳಿದ್ದಾರೆ.

ಈ ಉಗ್ರ ಕೃತ್ಯವನ್ನು ವಿಶ್ವ ಹಿಂದೂ ಪರಿಷತ್ ಬಲವಾಗಿ ಖಂಡಿಸುತ್ತದೆ. ಈ ಕೃತ್ಯದಲ್ಲಿ ಸ್ಥಳೀಯರ ಕೈವಾಡವಿರದೆ ಈ ಘಟನೆ ನಡೆಯಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಬಾಂಬ್ ಟ್ರಯಲ್ ಬ್ಲಾಸ್ಟ್ ನಡೆದಿದ್ದು, ಆದ್ದರಿಂದ ಈ ಪ್ರಕರಣವನ್ನು  ಉನ್ನತ ಮಟ್ಟದ ತನಿಖೆ ನಡೆಸಿ ಈ ಕೃತ್ಯದ ಹಿಂದೆ ಕೈಜೋಡಿಸಿದವರನ್ನು ಶೀಘ್ರವಾಗಿ ಬಂಧಿಸಿ ಸಮಗ್ರ ತನಿಖೆ ನಡೆಸಲು ಆಗ್ರಹಿಸುತ್ತೇನೆ ಎಂದು ಅವರು ಶರಣ್ ಪಂಪ್ ವೆಲ್ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ