ಕಂದಕಕ್ಕೆ ಉರುಳಿದ ಜೀಪ್: ಚಾಲಕಿಯ ದಾರುಣ ಸಾವು - Mahanayaka

ಕಂದಕಕ್ಕೆ ಉರುಳಿದ ಜೀಪ್: ಚಾಲಕಿಯ ದಾರುಣ ಸಾವು

jeep accident
23/11/2022


Provided by

ಚಿಕ್ಕಮಗಳೂರು:  ಚಾಲಕಿಯ ನಿಯಂತ್ರಣ ತಪ್ಪಿ ಜೀಪ್ ಕಂದಕಕ್ಕೆ ಬಿದ್ದ ಪರಿಣಾಮ ಚಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ.

ಕಳಸ ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಹೊಸಗದ್ದೆಯಿಂದ ಹೊರನಾಡಿಗೆ ಹೋಗುತ್ತಿದ್ದ ಜೀಪ್  ಚಾಲಕಿಯ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿದೆ.

ಅಪಘಾತದ ಪರಿಣಾಮ ಜೀಪ್  ಚಲಾಯಿಸುತ್ತಿದ್ದ ಅಕ್ಷತಾ(35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ