ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ: ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ - Mahanayaka

ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ: ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

araga jnanendra
23/11/2022


Provided by

ಮಂಗಳೂರು: ಆಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿದರು.

ಇದೇ ವೇಳೆ ಸ್ಫೋಟದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇನ್ನೂ ಘಟನೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆಗೆ ಗೃಹ ಸಚಿವರು ಸಭೆ ನಡೆಸಲಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಧ್ಯಾಹ್ನ ಮೂಡುಬಿದಿರೆ, ಕಾರ್ಕಳ, ಆಗುಂಬೆ ರಸ್ತೆ ಮೂಲಕ ಶಿವಮೊಗ್ಗಕ್ಕೆ ಪಯಣ ಬೆಳೆಸಲಿದ್ದಾರೆ.

ಈ ಸಂದರ್ಭದಲ್ಲಿ ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ, ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್, ಡಿಸಿಪಿ ಅನ್ಶು ಕುಮಾರ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ