ಧರ್ಮಸ್ಥಳಕ್ಕೆ ಹೋಗಿ ದರ್ಶನ ಮುಗಿಸಿ ಬರುತ್ತಿದ್ದ ವೇಳೆ  ಭೀಕರ ಅಪಘಾತ - Mahanayaka

ಧರ್ಮಸ್ಥಳಕ್ಕೆ ಹೋಗಿ ದರ್ಶನ ಮುಗಿಸಿ ಬರುತ್ತಿದ್ದ ವೇಳೆ  ಭೀಕರ ಅಪಘಾತ

charmady
24/11/2022

ಚಾರ್ಮಾಡಿ ಘಾಟ್: ಆಂಬುಲೆನ್ಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿರುವ ಘಟನೆಗೆ ಸಂಬಂಧಿಸಿದಂತೆ  ಇನ್ನಷ್ಟು ಮಾಹಿತಿಗಳು ಮಹಾನಾಯಕ.ಇನ್ ಗೆ ದೊರಕಿದೆ.

ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ಹೋಗುತ್ತಿದ್ದ ಆಂಬುಲೆನ್ಸ್, ಒಂದನೇ ತಿರುವಿನಲ್ಲಿ ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಆಟೋದಲ್ಲಿದ್ದ ನಾಲ್ವರಿಗೆ ಗಾಯವಾಗಿದೆ. ಗಾಯಾಳುಗಳನ್ನು ಕಕ್ಕಿಂಜೆ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತಕ್ಕೀಡಾದ ಆಟೋ ಬಣಕಲ್ ಪಟ್ಟಣದ ಆಟೋವಾಗಿದ್ದು, ಆಟೋದಲಿದ್ದ ಪ್ರಯಾಣಿಕರು ಧರ್ಮಸ್ಥಳಕ್ಕೆ ಹೋಗಿ ದರ್ಶನ ಮುಗಿಸಿ ಬರುವಾಗ  ಈ ಭೀಕರ ಅಪಘಾತ ನಡೆದಿದೆ.

ಅಪಘಾತದ ತೀವ್ರತೆಗೆ  ಎರಡು ವಾಹನಗಳು ಜಖಂಗೊಂಡಿದೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಚಾರ್ಮಾಡಿ ಘಾಟಿಯಲ್ಲಿ ಆಂಬುಲೆನ್ಸ್—ರಿಕ್ಷಾ ಮುಖಾಮುಖಿ ಡಿಕ್ಕಿ

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ