ರಾಜ್ಯದಲ್ಲಿ ಮತ್ತೊಮ್ಮೆ ಕುತೂಹಲ ಸೃಷ್ಟಿಸಿದ ರಮೇಶ್ ಜಾರಕಿಹೊಳಿ ರಾಜಕೀಯ ನಡೆ! - Mahanayaka

ರಾಜ್ಯದಲ್ಲಿ ಮತ್ತೊಮ್ಮೆ ಕುತೂಹಲ ಸೃಷ್ಟಿಸಿದ ರಮೇಶ್ ಜಾರಕಿಹೊಳಿ ರಾಜಕೀಯ ನಡೆ!

ramesh jarakiholi
28/11/2022


Provided by

ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಸುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಕಾರಣ ಕರ್ತರಾಗಿದ್ದ ರಮೇಶ್ ಜಾರಕಿಹೊಳಿ ಅವರು ಬಳಿಕ ಪಕ್ಷದಲ್ಲಿ ಮೂಲೆಗುಂಪಾಗಿದ್ದರು. ಈ ನಡುವೆ ಇದೀಗ ಮಹತ್ವದ ಬೆಳವಣಿಗೆಯೊಂದು ನಡೆದಿದೆ.

ಬೆಳಗಾವಿಯ ವಿದ್ಯಾನಗರದಲ್ಲಿರುವ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರ ನಿವಾಸಕ್ಕೆ ಸೋಮವಾರ ಎಸ್ ಸಿ, ಎಸ್ ಟಿ‌ ಸಮುದಾಯದ ವಿವಿಧ ಪೀಠಗಳ ಏಳು ಜನ ಮಠಾಧೀಶರು ಭೇಟಿ ನೀಡಿದ್ದು, ರಹಸ್ಯ ಸಭೆ ನಡೆದಿದೆ ಎನ್ನಲಾಗಿದೆ.

ಸ್ವಾಮೀಜಿಗಳಿಗೆ ಹಣ್ಣು ಹಂಪಲು ನೀಡಿ ಗೌರವಿಸಿದ ಜಾರಕಿಹೊಳಿ ಸಹೋದರರು, ಆಶೀರ್ವಾದ ಪಡೆದರು. ಬಳಿಕ ಮಾಧ್ಯಮಗಳನ್ನು ಹೊರಗೆ ಕಳುಹಿಸಿ ರಹಸ್ಯ ಸಭೆ ನಡೆಸಲಾಯಿತು. ಈ ಮೂಲಕ ಮುಂದಿನ ರಾಜಕೀಯ ನಡೆಯ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲು ಜಾರಕಿಹೊಳಿ ಸಹೋದರರು ಮುಂದಾಗಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ