ಉಡುಪಿ‌, ಮಲ್ಪೆ ವೃತ್ತಗಳಿಗೆ ಮೊಗವೀರರ ಕುಲಗುರು, ಮಧ್ವರಾಜ್ ಹೆಸರಿಡುವಂತೆ ಮನವಿ - Mahanayaka

ಉಡುಪಿ‌, ಮಲ್ಪೆ ವೃತ್ತಗಳಿಗೆ ಮೊಗವೀರರ ಕುಲಗುರು, ಮಧ್ವರಾಜ್ ಹೆಸರಿಡುವಂತೆ ಮನವಿ

udupi and malpe circle
03/12/2022


Provided by

ಉಡುಪಿ ನಗರಸಭೆಯ ವ್ಯಾಪ್ತಿಯ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ವೃತ್ತಕ್ಕೆ ಮೊಗವೀರ ಸಮಾಜದ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಮತ್ತು ಮಲ್ಪೆ ಬಸ್ ನಿಲ್ದಾಣದ ವೃತ್ತಕ್ಕೆ ಮೊಗವೀರ ಸಮಾಜದ ಮುಖಂಡರಾಗಿದ್ದ ದಿ.ಮಲ್ಪೆ ಮಧ್ವರಾಜರ ಹೆಸರಿಡಲು ನಗರಸಭೆ ಪೌರಾಯುಕ್ತ ಡಾ.ಉದಯ್ ಕುಮಾರ್ ಶೆಟ್ಟಿ ಹಾಗೂ ಅಧ್ಯಕ್ಷೆ ಸುಮಿತ್ರಾ ನಾಯಕ್ ಇವರಿಗೆ ಇಂದು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಕೋಟ್ಯಾನ್, ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಗುಂಡು ಅಮೀನ್, ಶಂಕರ್ ಸಾಲ್ಯಾನ್ ಹಾಗೂ ಮಾಜಿ ನಗರಸಭಾ ಸದಸ್ಯ ಸತೀಶ್ ಪುತ್ರನ್ ಉಪಸ್ಥಿತರಿದ್ದರು.

ಬಳಿಕ ನಿಯೋಗವು ಈ ಬಗ್ಗೆ ನಗರಸಭೆಯ ವಿಪಕ್ಷ ನಾಯಕ ರಮೇಶ್ ಕಾಂಚನ್ ಅವರಿಗೂ ಮನವಿ ಸಲ್ಲಿಸಿ ಒತ್ತಾಯಿಸಿತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ