ನನ್ನನ್ನು ಮುಲ್ಲಾ ಅಂತ ಕರೆಯೋಕ್ಕಾಗಲ್ಲ, ಹಿಂದೂ ಹುಲಿ ಅಂತಾನೇ ಕರೆಯಬೇಕು: ಸಿ.ಟಿ.ರವಿ - Mahanayaka

ನನ್ನನ್ನು ಮುಲ್ಲಾ ಅಂತ ಕರೆಯೋಕ್ಕಾಗಲ್ಲ, ಹಿಂದೂ ಹುಲಿ ಅಂತಾನೇ ಕರೆಯಬೇಕು: ಸಿ.ಟಿ.ರವಿ

c t ravi
07/12/2022


Provided by

ಚಿಕ್ಕಮಗಳೂರು:  ಬಿಜೆಪಿ ನಾಯಕರ ಹೆಸರಿಗೆ ಮುಸ್ಲಿಂ ಹೆಸರನ್ನು ಹಾಕಿ ಟ್ವೀಟ್ ಮಾಡ್ತಿರೋ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ  ಬಿಜೆಪಿ ನಾಯಕ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದರು.

ಬಿಜೆಪಿ ನಾಯಕರ ಸ್ವಭಾವ ಹಾಗೆ ಇದ್ರೆ ಕಾಂಗ್ರೆಸ್ನವರು ಖಂಡಿತ ಕರೆಯಲಿ. ಕುಂಕುಮ ಕಂಡರೆ ಆಗದಿದ್ರೆ, ಕೇಸರಿ ನೋಡಿದ್ರೆ ಆಗದಿದ್ರೆ,  ಮುಲ್ಲಾ ಗಳ ಮೇಲೆ ಪ್ರೀತಿ ಜಾಸ್ತಿ ಇದ್ರೆ ಖಂಡಿತ ಕರೆಯಬಹುದು ಎಂದು ಅವರು ಹೇಳಿದರು.

ನನ್ನನ್ನು ಮುಲ್ಲಾ ಅಂತ ಕರೆಯೋಕ್ಕಾಗಲ್ಲ, ಹಿಂದೂ ಹುಲಿ ಅಂತಾನೇ ಕರೆಯಬೇಕು. ನನ್ನ ಮುಲ್ಲಾ ಅಂತ ಕರೆದ್ರೆ ಮುಲ್ಲಾಗಳೂ ಒಪ್ಪಿಕೊಳ್ಳಲ್ಲ. ಸ್ವಭಾವಕ್ಕೆ ತಕ್ಕಂತೆ ಬಿರುದುಗಳು ನಮಗೆ ಬರುತ್ತದೆ ಎಂದು ಅವರು ಹೇಳಿದರು.

ಪರ್ಷಿಯನ್ ಭಾಷೆಯನ್ನ ಆಡಳಿತ ಭಾಷೆಯನ್ನಾಗಿ ಮಾಡಿದವನನ್ನ ಕನ್ನಡ ಪ್ರೇಮಿ ಅಂತ ಹೇಳಕ್ಕಾಗುತ್ತಾ? ಹಾಗೆ ಹೇಳಿದ್ರೆ ಅದಕ್ಕಿಂತ ಅಪಪ್ರಚಾರ ಬೇರೆ ಏನಿದೆ? ಎಂದು ಅವರು ಪ್ರಶ್ನಿಸಿದರು.

ಮುಲ್ಲಾ ಅನ್ನೋ ಹೆಸರು ಯಾರಿಗೆ ಕನೆಕ್ಟ್ ಆಗುತ್ತೆ ಅಂದ್ರೆ, ಶಾದಿ ಭಾಗ್ಯ, ದೇ ಆರ್ ಆಲ್ ಮೈ ಬ್ರದರ್ಸ್ ಅನ್ನೋರಿಗೆ ಕನೆಕ್ಟ್ ಆಗುತ್ತೆ. ಬೆಂಕಿ ಹಾಕಿದ್ರು ಕೂಡ ಅಮಾಯಕರು ಅನ್ನೋರಿಗೆ ಕನೆಕ್ಟ್ ಆಗುತ್ತೆ. ಕೇಸರಿ, ಕುಂಕುಮವನ್ನ ದೂಡಿ ಟೋಪಿಯನ್ನ ಪ್ರೀತಿಯಿಂದ ಹಾಕಿಕೊಳ್ಳುವವರಿಗೆ ಕನೆಕ್ಟ್ ಆಗುತ್ತೆ ಎಂದು ಕಾಂಗ್ರೆಸ್ ನಾಯಕರಿಗೆ ಸಿ.ಟಿ.ರವಿ ಕುಟುಕಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ