ಮ್ಯಾಂಡೋಸ್ ಪರಿಣಾಮ:  ಸಿಎಂ ಬೊಮ್ಮಾಯಿ ಕಾರ್ಯಕ್ರಮದ ಸ್ಥಳ ಕೆಸರುಮಯ! - Mahanayaka
1:25 AM Monday 15 - September 2025

ಮ್ಯಾಂಡೋಸ್ ಪರಿಣಾಮ:  ಸಿಎಂ ಬೊಮ್ಮಾಯಿ ಕಾರ್ಯಕ್ರಮದ ಸ್ಥಳ ಕೆಸರುಮಯ!

chamarajanagara
12/12/2022

ಚಾಮರಾಜನಗರ: ಎರಡನೇ ಬಾರಿ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಲಿರುವ ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮಕ್ಕೆ ವರುಣ ಕಾಡುವ ಆತಂಕ ಶುರುವಾಗಿದೆ.


Provided by

ಹೌದು… ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸಿಎಂ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಮಂಗಳವಾರ ಬೊಮ್ಮಾಯಿ ಆಗಮಿಸಲಿದ್ದಾರೆ. ಆದರೆ, ಮಳೆ ಬಂದರೇ ಕ್ರೀಡಾಂಗಣದಲ್ಲಿ ನೀರು ನಿಲ್ಲುವುದರಿಂದ ವೇದಿಕೆ ಆವರಣ ಕೆಸರುಮಯವಾಗಿದ್ದು ಅಧಿಕಾರಿಗಳು ಪೇಚಿಗೆ ಸಿಲುಕಿದ್ದಾರೆ.

ಮ್ಯಾಂಡೋಸ್ ಚಂಡಮಾರತದ ಪರಿಣಾಮ ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಎಡಬಿಡದೇ ಮಳೆಯಾಗುತ್ತಿದ್ದು ಇನ್ನೂ 3 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಸದ್ಯ, ಕೆಸರುಮಯ ಸ್ಥಳಕ್ಕೆ ಮಣ್ಣು ಸುರಿದು ಹದ ಮಾಡುತ್ತಿದ್ದು ನೀರು ಕ್ರೀಡಾಂಗಣದ‌ ಒಳಕ್ಕೆ ನುಗ್ಗದಂತೆ ಚರಂಡಿಗಳನ್ನು ಸಹ ತೆಗೆದಿದ್ದು ಜೋರು ಮಳೆಯಾದರೆ ಮುಂದೇನು ಎಂಬ ಚಿಂತೆ ಸದ್ಯಕ್ಕೆ ಕಾಡುತ್ತಿದೆ.

ಇನ್ಮು, ಬಸವರಾಜ ಬೊಮ್ಮಾಯಿ ಎರಡನೇ ಬಾರಿ ಜಿಲ್ಲೆಗೆ ಭೇಟಿ ಕೊಡುತ್ತಿದ್ದು ನೂರಾರು ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಚಾಲನೆ ಕೊಡಲಿದ್ದಾರೆ. 25 ಸಾವಿರ ಆಸನ ವ್ಯವಸ್ಥೆ ಕಲ್ಪಿಸಿರುವ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ