ಬೆಳ್ತಂಗಡಿ: ಆಸ್ಪತ್ರೆಯಲ್ಲಿ ಮಹಿಳೆಯ ಚಿನ್ನ ಕದ್ದಿದ್ದ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ ಪೊಲೀಸರು - Mahanayaka

ಬೆಳ್ತಂಗಡಿ: ಆಸ್ಪತ್ರೆಯಲ್ಲಿ ಮಹಿಳೆಯ ಚಿನ್ನ ಕದ್ದಿದ್ದ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ ಪೊಲೀಸರು

belthangady
15/12/2022


Provided by

ಬೆಳ್ತಂಗಡಿ: ಆರುತಿಂಗಳ ಹಿಂದೆ ಶಾಂತಿವನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು ನಿವಾಸಿಯಾಗಿರುವ ಹೇಮಾ ಎಂಬವರು ಶಾಂತಿವನಕ್ಕೆ ಚಿಕಿತ್ಸೆಗೆಂದು ಬಂದಿದ್ದರು. ಈ ವೇಳೆ ಅವರ ಬ್ಯಾಗಿನಿಂದ 80 ಗ್ರಾಂ ತೂಕದ ಚಿನ್ನದ ಸರ ಕಳ್ಳತನವಾಗಿತ್ತು  ಈ ಬಗ್ಗೆ ಅವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತನಿರೀಕ್ಷಕ ಶಿವಕುಮಾರ್ ಹಾಗೂ ಧರ್ಮಸ್ಥಳ ಪಿ.ಎಸ್.ಐ ಅನಿಲ್ ಕುಮಾರ್ ನೇತೃತ್ವದ ತಂಡ ಬೆಂಗಳೂರಿನಲ್ಲಿದ್ದ ಆರೋಪಿ ವರ್ಷಾ ಎಸ್.(26) ಎಂಬವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ಆಕೆಯಿಂದ 65 ಗ್ರಾಂ ತೂಕದ ರೂ 2.5 ಲಕ್ಷ ಮೌಲ್ಯದ ಸರವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ