ಲಾಯಿಲದಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸಾವು, ಓರ್ವನಿಗೆ ಗಂಭೀರ ಗಾಯ - Mahanayaka

ಲಾಯಿಲದಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸಾವು, ಓರ್ವನಿಗೆ ಗಂಭೀರ ಗಾಯ

accident
20/12/2022


Provided by

ಬೆಳ್ತಂಗಡಿ: ಲಾಯಿಲದಲ್ಲಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ಮಂಗಳವಾರ ಸಂಜೆ ಸಂಬವಿಸಿದೆ.

ಉಜಿರೆ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ವಿಜಯ ಎಂಬವರು ಮೃತ ವ್ಯಕ್ತಿಯಾಗಿದ್ದಾರೆ. ಉಜಿರೆಯಲ್ಲಿ ಕೆಲಸ ಮುಗಿಸಿ ಆತ ಮನೆಗೆ ಹಿಂತಿರುಗುತ್ತಿದ್ದ ವೇಳೆ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂವಿಸಿದೆ.

ಅಪಘಾತದ ಪರಿಣಾಮ ವಿಜಯ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಬಸ್ ನೇರವಾಗಿ ಬಂದು ಬೈಕಿಗೆ ಡಿಕ್ಕಿ ಹೊಡೆದಿದ್ದು,  ಹೊಡೆತದ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ