ಪವಿತ್ರ ಉಮ್ರಾ ಯಾತ್ರೆಯಲ್ಲಿದ್ದ ವ್ಯಕ್ತಿ ಮಕ್ಕಾದಲ್ಲಿ ನಿಧನ - Mahanayaka
7:44 AM Tuesday 16 - September 2025

ಪವಿತ್ರ ಉಮ್ರಾ ಯಾತ್ರೆಯಲ್ಲಿದ್ದ ವ್ಯಕ್ತಿ ಮಕ್ಕಾದಲ್ಲಿ ನಿಧನ

abubakar
21/12/2022

ಪವಿತ್ರ ಉಮ್ರಾ ಯಾತ್ರೆಗೆಂದು ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ನಿಧನರಾದ ಬಗ್ಗೆ ವರದಿಯಾಗಿದೆ.


Provided by

ಕಡಬದ ಕೋಡಿಂಬಾಳದ ನಿವಾಸಿ, ಆಟೋ ಚಾಲಕರಾಗಿದ್ದ ಅಬೂಬಕರ್, ಮೃತಪಟ್ಟವರು. ಅಬೂಬಕರ್ ಅವರು ತನ್ನ ಪತ್ನಿ ಸೇರಿದಂತೆ ನಲ್ವತ್ತು ಜನರ ತಂಡದೊಂದಿಗೆ ಪವಿತ್ರ ಉಮ್ರಾ ಯಾತ್ರೆ ಕೈಗೊಂಡಿದ್ದರು.

ಸೌದಿ ಅರೇಬಿಯಾದ ಮಕ್ಕಾದಲ್ಲಿ ಅಬೂಬಕರ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಮೃತದೇಹವನ್ನು ಮಕ್ಕಾದಲ್ಲೇ ದಫನಕ್ರಿಯೆ ಮಾಡಲಾಗುವುದೆಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ