ರಾಜ್ಯದ 330 ಗ್ರಾಮ ಪಂಚಾಯ್ತಿಗಳಲ್ಲಿ ಗ್ರಂಥಾಲಯ, ಮಾಹಿತಿ ಕೇಂದ್ರ ಸ್ಥಾಪನೆಗೆ ಆದೇಶ - Mahanayaka
11:49 PM Wednesday 22 - October 2025

ರಾಜ್ಯದ 330 ಗ್ರಾಮ ಪಂಚಾಯ್ತಿಗಳಲ್ಲಿ ಗ್ರಂಥಾಲಯ, ಮಾಹಿತಿ ಕೇಂದ್ರ ಸ್ಥಾಪನೆಗೆ ಆದೇಶ

library
22/12/2022

ಬೆಂಗಳೂರು: ರಾಜ್ಯದ 330 ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ 5,633 ಗ್ರಾಮ ಪಂಚಾಯ್ತಿ ಗ್ರಂಥಾಲಯಗಳ ನಿರ್ವಹಣೆಯನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯ್ತಿಗಳಿಗೆ ವರ್ಗಾಯಿಸಲಾಗಿರುತ್ತದೆ ಎಂದಿದೆ ಎಂದು ವರದಿಯಾಗಿದೆ.

ರಾಜ್ಯದ ಪ್ರಸ್ತುತ 5,954 ಗ್ರಾಮ ಪಂಚಾಯ್ತಿಗಳಿದ್ದು, 5575 ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಆರ್ಥಿಕ ಇಲಾಖೆಯು 330 ಗ್ರಾಮ ಪಂಚಾಯ್ತಿಗಳಲ್ಲಿ ಲಭ್ಯವಿರುವ ಕಟ್ಟಡಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳನ್ನು ಮಂಜೂರು ಮಾಡಲು ಸಹಮತಿ ನೀಡಿರುತ್ತದೆ ಎಂದು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ