ಕೊಳ್ಳೇಗಾಲ: ವ್ಯಕ್ತಿಯ ತಲೆಗೆ ಹೊಡೆದು ಬರ್ಬರ ಹತ್ಯೆ! - Mahanayaka

ಕೊಳ್ಳೇಗಾಲ: ವ್ಯಕ್ತಿಯ ತಲೆಗೆ ಹೊಡೆದು ಬರ್ಬರ ಹತ್ಯೆ!

kollegala
22/12/2022

ಕೊಳ್ಳೇಗಾಲ: ತಾಲೂಕಿನ ಮಧುವನಹಳ್ಳಿ ಗ್ರಾಮದ ಜಿ.ವಿ.ಗೌಡ ನಗರದ ನಿವಾಸಿಯೊಬ್ಬನನ್ನು ತಲೆಗೆ ಹೊಡೆದು ಹತ್ಯೆ ಮಾಡಲಾಗಿದ್ದು ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹದೇವಸ್ವಾಮಿ( 45)  ಕೊಲೆಯಾದ ವ್ಯಕ್ತಿ. ಈತನಿಗೆ ಪತ್ನಿ , ಇಬ್ಬರು ಮಕ್ಕಳಿದ್ದಾರೆ. ಪತ್ನಿ ಹಾಗೂ ಮಗ ಪ್ರವಾಸಕ್ಕೆ ತೆರಳಿದ್ದರು. ಈ ನಡುವೆ ಮನೆಯಲ್ಲಿ ಯಾರು ಇಲ್ಲದ ವೇಳೆ ಮಹದೇವ ಸ್ವಾಮಿ ತಲೆಗೆ ಯಾರೋ ಹೊಡೆದು ಹತ್ಯೆಮಾಡಿದ್ದಾರೆ ಎನ್ನಲಾಗಿದೆ‌.

ವಿಚಾರ ತಿಳಿದ ಡಿವೈಎಸ್ಪಿ ಜಿ.ಯು. ಸೋಮೇಗೌಡ, ವೃತ್ತ ನಿರೀಕ್ಷಕ ಶಿವರಾಜ್ ಮುಧೋಳ್ ಹಾಗೂ ಸಬ್ ಇನ್ಸ್ ಪೆಕ್ಟರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ