ಹೊಸ ವರ್ಷದ ಪ್ರಯುಕ್ತ ಈ ರಾಜ್ಯದಲ್ಲಿ ರಾತ್ರಿ 1 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ
ತೆಲಂಗಾಣ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ತೆಲಂಗಾಣದಲ್ಲಿ ಸಾರ್ವಜನಿಕರ ಸಂತೋಷ ಕೂಟಗಳಿಗೆ ಅನುಕೂಲವಾಗುವಂತೆ ಮಧ್ಯರಾತ್ರಿ 1ರವರೆಗೂ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
ತೆಲಂಗಾಣ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೋಮಶೇಖರ್ ಕುಮಾರ್ ಈ ಆದೇಶ ಹೊರಡಿಸಿದ್ದು, 2022ರ ಡಿಸೆಂಬರ್ 31ರಂದು ಮಧ್ಯರಾತ್ರಿಯವರೆಗೂ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
ಹೊಸ ವರ್ಷದ ಹಿನ್ನೆಲೆಯಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಗಳು ಬೆಳಿಗ್ಗೆ 1 ಗಂಟೆಯವರೆಗೆ ತೆರೆದಿರುತ್ತವೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಎಲ್ಲಾ ಕೋವಿಡ್ ಸುರಕ್ಷತಾ ಪ್ರೋಟೋಕಾಲ್ ಗಳನ್ನು ಅನುಸರಿಸಿಕೊಂಡು ಹೊಸ ವರ್ಷಾಚರಣೆ ಮಾಡುವಂತೆ ಸಾರ್ವಜನಿಕರಿಗೆ ಸರ್ಕಾರ ಮನವಿ ಮಾಡಿಕೊಂಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka




























