ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವಿದ್ಯಾರ್ಥಿಯ ಮೇಲೆ ಹರಿದ ಬಸ್: ಬಾಲಕನ ದಾರುಣ ಸಾವು - Mahanayaka

ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವಿದ್ಯಾರ್ಥಿಯ ಮೇಲೆ ಹರಿದ ಬಸ್: ಬಾಲಕನ ದಾರುಣ ಸಾವು

kinnigoli accident
02/01/2023


Provided by

ಮಂಗಳೂರು: ಬಸ್ ಡಿಕ್ಕಿ ಹೊಡೆದು ಬಾಲಕ ಸ್ಥಳದಲ್ಲಿ ಮೃತಪಟ್ಟ ದಾರುಣ ಘಟನೆ ಮಂಗಳೂರಿನ ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯಲ್ಲಿ ಸಂಭವಿಸಿದೆ.

ಮೃತ ಬಾಲಕನನ್ನು  ಚರಣ್ (15) ಎಂದು ಗುರುತಿಸಲಾಗಿದೆ. ಮೃತ ಬಾಲಕ ಚರಣ್ ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಬರುತ್ತಿರುವಾಗ ಈ ದುರಂತ ಸಂಭವಿಸಿದೆ.

ಕಿನ್ನಿಗೋಳಿ ಕಡೆಯಿಂದ ಕಟೀಲು ಕಡೆಗೆ ಹೋಗುತ್ತಿದ್ದ ನಂದಿನಿ ಬಸ್ಸು ಉಲ್ಲಂಜೆ ಜುಮಾದಿ ಗುಡ್ಡೆ ತಿರುವು ಬಳಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ