ನಡೆದಾಡುವ ದೇವರು ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀ ಲಿಂಗೈಕ್ಯ - Mahanayaka

ನಡೆದಾಡುವ ದೇವರು ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀ ಲಿಂಗೈಕ್ಯ

siddeshwar shree
02/01/2023


Provided by

ಕಳೆದ ಹಲವು ವಾರಗಳಿಂದ ಅನಾರೋಗ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಪ್ರವಚನಕಾರ, ನಡೆದಾಡುವ ದೇವರೆಂದೇ ಜನಪ್ರಿಯತೆಗಳಿಸಿದ್ದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀ ಇಂದು ಸಂಜೆ ಲಿಂಗೈಕ್ಯರಾಗಿದ್ದಾರೆ.

ಬಿಎಲ್ ಡಿಇ ಸಂಸ್ಥೆಯ ಬಿ.ಎಂ.ಪಾಟೀಲ್ ಮೆಡಿಕಲ್ ಕಾಲೇಜ್ ಹಾಗೂ ಹಾಸ್ಪಿಟಲ್ ನಲ್ಲಿ ಖ್ಯಾತ ವೈದ್ಯರ ತಂಡ ಶ್ರೀಗಳಿಗೆ  ಚಿಕಿತ್ಸೆ ನೀಡುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಅವರು ಲಿಂಗೈಕ್ಯರಾಗಿದ್ದಾರೆ.

ಸಿದ್ದೇಶ್ವರ ಸ್ವಾಮೀಜಿ 1941 ಅಕ್ಟೋಬರ್ 24ರಂದು ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೈತ ಕುಟುಂಬದಲ್ಲಿ ಜನಿಸಿದ್ದರು. ಇವರಿಗೆ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿಯನ್ನೂ ಘೋಷಣೆ ಮಾಡಿತ್ತು. ಆದರೆ ಇವರು ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ