ರಾಜ್ಯಾದ್ಯಂತ ವಿವಾದ ಸೃಷ್ಟಿಸಿದ ನಳಿನ್ ಕುಮಾರ್ ಕಟೀಲ್ ಜಾಣತನದ ಹೇಳಿಕೆ! - Mahanayaka

ರಾಜ್ಯಾದ್ಯಂತ ವಿವಾದ ಸೃಷ್ಟಿಸಿದ ನಳಿನ್ ಕುಮಾರ್ ಕಟೀಲ್ ಜಾಣತನದ ಹೇಳಿಕೆ!

nalinkumar kateel
05/01/2023


Provided by

ನೀವು ರಸ್ತೆ, ಒಳಚರಂಡಿಯಂತಹ ಸಮಸ್ಯೆಗಳನ್ನು ಮಾತನಾಡುವ ಅಗತ್ಯವಿಲ್ಲ. ಬದಲಿಗೆ ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ. ಲವ್ ಜಿಹಾದ್ ‌‌ನಿಂದ ರಕ್ಷಿಸಿ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಜಾಣತನದ ಹೇಳಿಕೆ ಇದೀಗ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ.

ಮಂಗಳೂರಲ್ಲಿ ಮಾತನಾಡಿರುವ ಅವರು, ಲವ್ ಜಿಹಾದ್ ನಿಲ್ಲಿಸಲು ‌ಭಾರತೀಯ ಜನತಾ ಪಾರ್ಟಿ ಬೇಕು. ಲವ್ ಜಿಹಾದ್ ವಿರುದ್ದ ಕಾನೂನನ್ನ ಬಿಜೆಪಿ ಸರ್ಕಾರ ತರುತ್ತೆ ಎಂದಿದ್ದಾರೆ. ಇನ್ನು ಲವ್ ಜಿಹಾದ್ ಇತ್ತೀಚೆಗೆ ಕಾಡುತ್ತಿರುವ ಬಹಳ ದೊಡ್ಡ ಸಾಮಾಜಿಕ ಪಿಡುಗಾಗಿದ್ದು, ಇದಕ್ಕೆ ನಿಮ್ಮ ಮಕ್ಕಳು ಬಲಿಯಾಗದಂತೆ ನೋಡಿಕೊಳ್ಳಿ. ಅದಕ್ಕೆ ಬಿಜೆಪಿಗೆ ಗೆಲ್ಲಿಸಿ ಅಧಿಕಾರ ನೀಡಿ. ಬಿಜೆಪಿ ಅಧಿಕಾರಕ್ಕೆ ಬಂದರೆ ಯುವಕ–ಯುವತಿಯರ ರಕ್ಷಣೆಗೆ ಬದ್ಧವಾಗಿದೆ ಎಂದಿದ್ದರು.

ಲವ್ ಜಿಹಾದ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ, ಅಭಿವೃದ್ಧಿಯ ಕುರಿತಾಗಿ ಮಾತನಾಡುವುದನ್ನು ಬಿಟ್ಟು ಜನರಲ್ಲಿ ಲವ್ ಜಿಹಾದ್ ಬಗ್ಗೆ ಮಾತನಾಡುವುದು ಸರಿಯೇ ಎಂದು ಪಶ್ನಿಸಿದ್ದಾರೆ.

ಲವ್ ಜಿಹಾದ್ ನಿಲ್ಲಿಸಲು ಭಾರತೀಯ ಜನತಾ ಪಾರ್ಟಿ ಬೇಕು. ಅದರ ವಿರುದ್ಧ ಕಾನೂನನ್ನು ಬಿಜೆಪಿ ಸರಕಾರ ತರುತ್ತೆ. ಲವ್ ಜಿಹಾದ್ ಬಹಳ ದೊಡ್ಡ ಸಾಮಾಜಿಕ ಪಿಡುಗಾಗಿದೆ. ಅದಕ್ಕೆ ನಿಮ್ಮ ಮಕ್ಕಳು ಬಲಿಯಾಗದಂತೆ ನೋಡಿಕೊಳ್ಳಬೇಕು. ಹಾಗಾಗಿ ಬಿಜೆಪಿಗೆ ಅಧಿಕಾರ ನೀಡಿ ಎಂದ ನಳಿನ್ ಕುಮಾರ್ ಕಟೀಲ್, ಯಕ್ಷಗಾನದಲ್ಲೂ ಬಿಜೆಪಿಯ ಪರ ಪ್ರಚಾರ ಮಾಡಿ ಎಂದು ಕರೆ ನೀಡುವ ಮೂಲಕ ವಿವಾದ ಹುಟ್ಟು ಹಾಕಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ