ಕುಳಿತುಕೊಂಡ ಸ್ಥಿತಿಯಲ್ಲಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ! - Mahanayaka
4:45 PM Thursday 11 - December 2025

ಕುಳಿತುಕೊಂಡ ಸ್ಥಿತಿಯಲ್ಲಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ!

kiran
10/01/2023

ಬೆಳ್ತಂಗಡಿ: ಯುವಕನೊಬ್ಬನ ಶವ ನದಿಯ ಕಿಂಡಿ ಅಣೆಕಟ್ಟಿನ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಜ.10ರಂದು ಸಂಜೆ ಪತ್ತೆಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸೋಮವತಿ ನದಿ ಸಂಗಾತಿನಗರ ರಸ್ತೆಯ ಬದಿಯಲ್ಲಿರುವ ಕಿಂಡಿ ಅಣೆಕಟ್ಟಿನಲ್ಲಿ ಲಾಯಿಲ ಗ್ರಾಮದ ಅಯೋಧ್ಯನಗರದ ನಿವಾಸಿ ಕಿರಣ್ (27) ಶವ ಪತ್ತೆಯಾಗಿದೆ.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಶವ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಕಿರಣ್ ಯಾವ ರೀತಿಯಾಗಿ  ಸಾವನ್ನಪ್ಪಿದ್ದಾನೆ ಎಂಬುದರ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ  ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದು ತನಿಖೆಯಿಂದಷ್ಟೇ ಮಾಹಿತಿಗಳು ತಿಳಿದು ಬರಬೇಕಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ