ಕೋಟ್ಪಾ ದಳದಿಂದ ಅಂಗಡಿ, ಹೋಟೆಲ್, ಬಾರ್, ರೆಸ್ಟೋರೆಂಟ್ ಮೇಲೆ ದಾಳಿ - Mahanayaka

ಕೋಟ್ಪಾ ದಳದಿಂದ ಅಂಗಡಿ, ಹೋಟೆಲ್, ಬಾರ್, ರೆಸ್ಟೋರೆಂಟ್ ಮೇಲೆ ದಾಳಿ

kotba
19/01/2023


Provided by

ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಇಂದು ಉಡುಪಿ ನಗರ ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4 ಮತ್ತು 6(ಎ) ಅಡಿಯಲ್ಲಿಒಟ್ಟು 42 ಪ್ರಕರಣ ದಾಖಲಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ರಾಷ್ಟ್ರೀಯ ತಂಬಾಕು ನಿಯಂತ್ರಣ ಘಟಕದ ಜಿಲ್ಲಾಸಲಹೆಗಾರ್ತಿ ಮಂಜುಳಾ ಶೆಟ್ಟಿ, ನಗರಸಭೆಯ ಸುರೇಂದ್ರ ಹಾಗೂ ನಗರ ಪೊಲೀಸ್ ಠಾಣೆಯ ಆರಕ್ಷಕರು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ