ಶವಾಗಾರದಲ್ಲಿ ಇರಿಸಲಾಗಿದ್ದ ಮೃತದೇಹದ ಕಣ್ಣು ನಾಪತ್ತೆ!

ಭೋಪಾಲ್: ಶವಾಗಾರದಲ್ಲಿ ಇರಿಸಲಾಗಿದ್ದ ಮೃತದೇಹದ ಕಣ್ಣು ನಾಪತ್ತೆಯಾದ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ನಡೆದಿದೆ.
ಶವಾಗಾರದಲ್ಲಿ ಇರಿಸಲಾಗಿದ್ದ ಮೃತದೇಹದ ಕಣ್ಣನ್ನು ಇಲಿಗಳು ಕಚ್ಚಿರುವುದು ಖಚಿತವಾಗಿದ್ದು, ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ.
ಮೃತದೇಹದಲ್ಲಿದ್ದ ಕಣ್ಣು ಹೇಗೆ ನಾಪತ್ತೆಯಾಯ್ತು ಅನ್ನೋ ವಿಚಾರದ ಬಗ್ಗೆ ಇದೀಗ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸದ್ಯ ಶವಾಗಾರದ ಸಿಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಾಥಮಿಕ ದೃಷ್ಟಿಯಲ್ಲಿ ಇಲಿ ಕಣ್ಣನ್ನು ಅಗಿದಿರುವ ಸಾಧ್ಯತೆ ಇದೆ. ಆದರೆ ತನಿಖೆ ಪೂರ್ಣಗೊಂಡ ನಂತರವೇ ಅದನ್ನು ದೃಢಪಡಿಸಬಹುದು ಎಂದು ನಿವಾಸಿ ವೈದ್ಯಾಧಿಕಾರಿ ಡಾ.ಅಭಿಷೇಕ್ ಠಾಕೂರ್ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw