ಚಿಕ್ಕಮಗಳೂರಿನ ವಿವಿಧೆಡೆ ಧಾರಾಕಾರವಾಗಿ ಸುರಿದ ಅಕಾಲಿಕ ಮಳೆ!

ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದೊಂದು ಗಂಟೆಯಿಂದ ಧಾರಾಕಾರ ಅಕಾಲಿಕ ಮಳೆಯಾಗಿದ್ದು, ಮಳೆಯಿಂದಾಗಿ ಜನರು ಕಂಗಾಲಾಗಿದ್ದಾರೆ.
ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಾಳೂರು, ಬಣಕಲ್, ಮತ್ತಿಕಟ್ಟೆ, ನಿಡುವಾಳೆ, ಗುತ್ತಿ, ಭೈರಾಪುರ, ಕಂದೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆ ಅಬ್ಬರಿಸಿದೆ.
ಜನವರಿಯಲ್ಲಿ ಬಂದ ಮಳೆ ಕಂಡು ಮಲೆನಾಡಿಗರು ಕಂಗಾಲಾಗಿದ್ದಾರೆ. ಈ ಮಳೆಯಿಂದ ಭತ್ತ ಅಡಿಕೆ ಕಾಫಿ ಮೆಣಸಿನ ಮೇಲೆ ವ್ಯತಿರಿಕ್ತ ಪರಿಣಾಮವಾಗಲಿದ್ದು, ರೈತರು, ಕೂಲಿ ಕಾರ್ಮಿಕರು, ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.
2022ರಲ್ಲೂ ವರ್ಷ ಪೂರ್ತಿ ಮಳೆ ಸುರಿದಿತ್ತ. ಈ ವರ್ಷವೂ ಜನವರಿಯಲ್ಲೇ ಮಳೆ ಕಂಡು ಭವಿಷ್ಯದ ಬಗ್ಗೆ ಬೆಳೆಗಾರರು ಕಂಗಾಲಾಗಿದ್ದಾರೆ. ಅಳಿದುಳಿದ ಬೆಳೆಯನ್ನೂ ಉಳಿಸಿಕೊಳ್ಳಲಾಗದೆ ರೈತರು ಚಿಂತಾಕ್ರಾಂತರಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw