ಆಕಸ್ಮಿಕವಾಗಿ ನದಿಗೆ ಬಿದ್ದಿದ್ದ ವ್ಯಕ್ತಿ ಸಾವು! - Mahanayaka
12:40 AM Wednesday 20 - August 2025

ಆಕಸ್ಮಿಕವಾಗಿ ನದಿಗೆ ಬಿದ್ದಿದ್ದ ವ್ಯಕ್ತಿ ಸಾವು!

dharnappa
26/01/2023


Provided by

ಬೆಳ್ತಂಗಡಿ: ಆಕಸ್ಮಿಕವಾಗಿ ನದಿಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತ ವ್ಯಕ್ತಿ ಚಾರ್ಮಾಡಿ ಕೊಳಂಬೆ ಪಾದೆ ಮನೆ ನಿವಾಸಿಯಾಗಿರುವ ಧರ್ಣಪ್ಪ ಪೂಜಾರಿ(50) ಎಂಬವರಾಗಿದ್ದಾರೆ.

ಇವರು ಜ.23ರಂದು ಕಕ್ಕಿಂಜೆ ಪೇಟೆಯಿಂದ ಸಾಮಾನು ಖರೀದಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಮನೆಯ ಸಮೀಪವಿರುವ ನದಿ ದಾಟುತ್ತಿದ್ದಾಗ ಆಕಸ್ಮಿಕವಾಗಿ ನದಿನೀರಿಗೆ ಬಿದ್ದಿದ್ದಾರೆ.

ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅವರನ್ನು ನದಿ ನೀರಿನಿಂದ ಮೇಲೆತ್ತುವ ಕಾರ್ಯ ಮಾಡಿದ್ದಾರೆ. ಕೂಡಲೆ ಅವರನ್ನು ಸ್ಥಳೀಯ ಆಸ್ಪತಗೆ ದಾಖಲಿಸಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ