ಬೆಳ್ತಂಗಡಿ: ವೈಯಕ್ತಿಕ ವಿಡಿಯೋ ವೈರಲ್ ಮಾಡುವ ಬೆದರಿಕೆಗೆ ಹೆದರಿ ದುಡುಕಿನ ನಿರ್ಧಾರ ತೆಗೆದುಕೊಂಡ ವಿದ್ಯಾರ್ಥಿ! - Mahanayaka
10:27 AM Saturday 18 - October 2025

ಬೆಳ್ತಂಗಡಿ: ವೈಯಕ್ತಿಕ ವಿಡಿಯೋ ವೈರಲ್ ಮಾಡುವ ಬೆದರಿಕೆಗೆ ಹೆದರಿ ದುಡುಕಿನ ನಿರ್ಧಾರ ತೆಗೆದುಕೊಂಡ ವಿದ್ಯಾರ್ಥಿ!

crime news
29/01/2023

ಬೆಳ್ತಂಗಡಿ: ಹಣ ನೀಡದಿದ್ದರೆ  ಇನ್ ಸ್ಟ್ರಾಗ್ರಾಂ ಮೂಲಕ ವೈಯುಕ್ತಿಕ ವೀಡಿಯೋವನ್ನು ವೈರಲ್ ಮಾಡುವುದಾಗಿ ಬಂದ ಬೆದರಿಕೆಗೆ ಹೆದರಿ ಕಾಲೇಜು ವಿದ್ಯಾರ್ಥಿಯೋರ್ವ ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದ್ದು ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Provided by

ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಬಿ.ಕಾಂ.  ವಿದ್ಯಾರ್ಥಿ ಸಾವಿಗೆ ಶರಣಾಗಲು ಯತ್ನಿಸಿದ ವಿದ್ಯಾರ್ಥಿಯಾಗಿದ್ದಾನೆ.  ಈತನಿಗೆ ಇನ್ ಸ್ಟ್ರಾಗ್ರಾಂ ಖಾತೆಯ ಮೂಲಕ ಅಪರಿಚಿತ ವ್ಯಕ್ತಿ ಪರಿಚಯವಾಗಿದ್ದು, ಬಳಿಕ ಚಾಟ್ ಮಾಡುತ್ತಿದ್ದು, ಇದಾದ ಬಳಿಕ ವೀಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ.

ಇದಾದ ಬಳಿಕ ತನ್ನ ಬಳಿ ನಿನ್ನ ವೈಯುಕ್ತಿಕ ವೀಡಿಯೋ ಇದೆ ಹಣ ನೀಡದಿದ್ದಲ್ಲಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದಾನೆ. ಹಣನೀಡಲು ಸಾಧ್ಯವಾಗದ ವಿದ್ಯಾರ್ಥಿ ಭಯಗೊಂಡು ಮನೆಯಲ್ಲಿ ವಿಷಸೇವಿಸಿದ್ದು, ಪರಿಣಾಮವಾಗಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಯನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಇದೀಗ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ