ಭಾರತೀಯ ಪರಂಪರೆಯಲ್ಲಿ ಪ್ರೇಮಿಗಳ ದಿನಾಚರಣೆ ಸರಿಯಲ್ಲ: ಬಜರಂಗದಳ ವಿರೋಧ - Mahanayaka
2:42 AM Friday 11 - September 2026

ಭಾರತೀಯ ಪರಂಪರೆಯಲ್ಲಿ ಪ್ರೇಮಿಗಳ ದಿನಾಚರಣೆ ಸರಿಯಲ್ಲ: ಬಜರಂಗದಳ ವಿರೋಧ

valentinesday
12/02/2023

ಪ್ರೇಮಿಗಳ ದಿನಾಚರಣೆಗೆ ಬಜರಂಗದಳ ವಿರೋಧ ವ್ಯಕ್ತಪಡಿಸಿದೆ.  ಪ್ರೇಮಿಗಳ ದಿನಾಚರಣೆ ಪ್ರೇರೇಪಿಸುವ ವಸ್ತುಗಳನ್ನು ಮಾರಾಟ ಮಾಡಬಾರದು ಎಂದು ಅಂಗಡಿಯವರಿಗೆ ಮನವಿ ಮಾಡಿದೆ.

ಭಾರತ ದೇಶವು ಪುಣ್ಯ ಭೂಮಿ.‌ ವೈಶಿಷ್ಟ್ಯವಾದ ಸಂಸ್ಕೃತಿ ಸಂಸ್ಕಾರವನ್ನು ನಮ್ಮ ದೇಶ ಹೊಂದಿದೆ. ಅಲ್ಲದೇ ನಮ್ಮ ಸಂಸ್ಕೃತಿ ಆಚರಣೆಗಳಿಗೆ ಅದರದೇ ಆದ ಮಹತ್ವವಿದ್ದು ಶತಮಾನಗಳ ಇತಿಹಾಸವನ್ನು ಹೊಂದಿದೆ. ಆದಾಗಿಯೂ ಭಾರತೀಯ ಸಂಸ್ಕೃತಿಗೆ ಸಡ್ಡು ಹೊಡೆಯುತ್ತಾ ಪಾಶ್ಚಿಮಾತ್ಯ ಸಂಸ್ಕೃತಿಗಳು ದಾಳಿ ಮಾಡುತ್ತಿವೆ. ಯುವ ಸಮುದಾಯವನ್ನು ತನ್ನೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿವೆ. ನಮ್ಮ ಅಮೂಲ್ಯವಾದ ಸಂಸ್ಕೃತಿ ಆಚರಣೆ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಇದಕ್ಕೆ ಸ್ಪಷ್ಟ ಉದಾಹರಣೆ ಪ್ರೇಮಿಗಳ ದಿನ ಹಾಗಾಗಿ ಬಜರಂಗದಳ ಪ್ರೇಮಿಗಳ ದಿನಾಚರಣೆಯನ್ನು ವಿರೋಧಿಸುತ್ತದೆ ಮತ್ತು ಪ್ರೇಮಿಗಳ ದಿನಾಚರಣೆಗೆ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದು ಇದನ್ನು ಬಜರಂಗದಳ ತೀವ್ರವಾಗಿ ವಿರೋಧಿಸುತ್ತದೆ ಎಂದಿದೆ.

ಭಾರತೀಯ ಪರಂಪರೆಯಲ್ಲಿ ಪ್ರೇಮಿಗಳ ದಿನಾಚರಣೆ ಸರಿಯಲ್ಲ. ಆದುದರಿಂದ ಪ್ರೇಮಿಗಳ ದಿನಾಚರಣೆ ಆಚರಿಸಬಾರದು. ಪ್ರೇಮಿಗಳ ದಿನಾಚರಣೆಯನ್ನು ಪ್ರೇರೇಪಿಸುವ ನಗರದ ಎಲ್ಲಾ ಹೂ ಅಂಗಡಿ ಮತ್ತು ಗಿಫ್ಟ್ ಸೆಂಟರ್ ಗಳು ಪ್ರೇಮಿಗಳ ದಿನಾಚರಣೆ ಸಂಬಂಧಿಸಿದ ಯಾವುದೇ ವಸ್ತುಗಳನ್ನು ಮಾರಾಟ ಮಾಡಬಾರದು ಮತ್ತು ಈ ಆಚರಣೆಗೆ ಬೆಂಬಲ ಸೂಚಿಸಬಾರದು ಎಂದು ವಿನಂತಿಸುತ್ತೇವೆ ಎಂದು ಬಜರಂಗದಳ ಜಿಲ್ಲಾ ಸಂಚಾಲಕರಾದ ನವೀನ್ ಮೂಡುಶೆಡ್ಡೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler