ತಮಾಷೆ ಮಾಡುವ ಹಕ್ಕು ಇರಬೇಕು ಎಂಬ ಹೇಳಿಕೆ ವಾಪಸ್ ಪಡೆದ ನಟ ಚೇತನ್ - Mahanayaka
12:09 PM Wednesday 22 - October 2025

ತಮಾಷೆ ಮಾಡುವ ಹಕ್ಕು ಇರಬೇಕು ಎಂಬ ಹೇಳಿಕೆ ವಾಪಸ್ ಪಡೆದ ನಟ ಚೇತನ್

chethan
13/02/2023

ಬಲವಾದ ಪ್ರಜಾಪ್ರಭುತ್ವಕ್ಕಾಗಿ ಯಾರನ್ನೇ ಆದರೂ ತಮಾಷೆ ಮಾಡುವ ಹಕ್ಕು ನಮಗಿರಬೇಕು ಎಂದು ಜೈನ್ ವಿಶ್ವವಿದ್ಯಾಲಯದಲ್ಲಿ ಮಾಡಿರುವ ಸ್ಕಿಟ್ ಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ನಟ ಚೇತನ್ ಇದೀಗ ತಮ್ಮ ಹೇಳಿಕೆಯನ್ನು ವಾಪಸ್ ಪಡೆದುಕೊಂಡಿದ್ದಾರೆ.

ಜೈನ್ ವಿಶ್ವವಿದ್ಯಾಲಯದಲ್ಲಿ ದಲಿತರ ಬಗ್ಗೆ ಮಾಡಿರುವ ಸ್ಕಿಟ್ ಕ್ಲಿಪ್‌ ಗಳನ್ನು ಪೂರ್ತಿಯಾಗಿ ನೋಡಿದ ನಂತರ, ನಾನು ನನ್ನ ಹಿಂದಿನ ಪೋಸ್ಟ್ ಅನ್ನು ಹಿಂತೆಗೆದುಕೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಜಾತೀಯತೆಯಲ್ಲಿ ಬೇರೂರಿರುವ ಶಿಕ್ಷಣ ವ್ಯವಸ್ಥೆಯಲ್ಲಿ, ಅಂತಹ ಚಿತ್ರಣಗಳು ಆಳವಾದ ಮಾನಸಿಕ ಪರಿಣಾಮಗಳನ್ನು ಹೊಂದಿವೆ– (ಉದಾಹರಣೆಗಳು ರೋಹಿತ್ ವೇಮುಲಾ ಮತ್ತು ಪಾಯಲ್ ತದ್ವಿ)

ಈ ಘಟನೆಗೆ ಜೈನ್ ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ಹೊಣೆ ಮಾಡಬೇಕು ಎಂದಿರುವ ಅವರು, ವಿದ್ಯಾರ್ಥಿಗಳನ್ನು ಅಪರಾಧಿಗಳಾಗಿಸುವುದು ಸರಿಯಾದ ಮಾರ್ಗವೇ? ನನಗೆ ಇನ್ನೂ ಅನುಮಾನವಿದೆ ಎಂದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ