ಲಿಂಗಧೀರನಹಳ್ಳಿ ತ್ಯಾಜ್ಯ ಘಟಕ ಸ್ಥಳಾಂತರ ಆಗ್ರಹಿಸಿ ಪ್ರತಿಭಟನೆಗೆ ಎಎಪಿ ಬೆಂಬಲ - Mahanayaka
5:11 AM Thursday 16 - October 2025

ಲಿಂಗಧೀರನಹಳ್ಳಿ ತ್ಯಾಜ್ಯ ಘಟಕ ಸ್ಥಳಾಂತರ ಆಗ್ರಹಿಸಿ ಪ್ರತಿಭಟನೆಗೆ ಎಎಪಿ ಬೆಂಬಲ

lingadhiranahalli
20/02/2023

ಬೆಂಗಳೂರು: ಯಶವಂತಪುರ ವಿಧಾನಸಭಾ ಕೇತ್ರದ ಲಿಂಗಧೀರನಹಳ್ಳಿಯಲ್ಲಿರುವ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಬೇರೆಡೆಗೆ ಸ್ಥಳಾಂತರ ಮಾಡಬೇಕೆಂದು ಆಗ್ರಹಿಸಿ ಸ್ಥಳೀಯರು ನಡೆಸುತ್ತಿರುವ ಪ್ರತಿಭಟನೆಗೆ ಆಮ್‌ ಆದ್ಮಿ ಪಾರ್ಟಿ ಬೆಂಬಲ ನೀಡಿದೆ.


Provided by

ಕಳೆದ ಎಂಟು ದಿನಗಳಿಂದ ಪ್ರತಿಭಟನಾಕಾರರ ಜೊತೆಗಿರುವ ಯಶವಂತಪುರ ಕ್ಷೇತ್ರದ ಎಎಪಿ ಸಂಭಾವ್ಯ ಅಭ್ಯರ್ಥಿ ಶಶಿಧರ ಆರಾಧ್ಯ ಮಾತನಾಡಿ, “ತ್ಯಾಜ್ಯ ಸಂಸ್ಕರಣಾ ಘಟಕದಿಂದಾಗಿ ಲಿಂಗಧೀರನಹಳ್ಳಿ ಪರಿಸರ ಸಂಪೂರ್ಣ ಹಾಳಾಗಿದೆ. ಹಲವು ವರ್ಷಗಳಿಂದ ಇಲ್ಲಿನ ಸ್ಥಳೀಯರು ಪದೇಪದೇ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಸುತ್ತಮುತ್ತಲಿನ ಜನರ ಆರೋಗ್ಯ ಹಾಗೂ ಜೀವದ ಜೊತೆ ರಾಜ್ಯ ಸರ್ಕಾರ, ಸ್ಥಳೀಯ ಶಾಸಕ ಎಸ್.ಟಿ.ಸೋಮಶೇಖರ್‌ ಹಾಗೂ ಬಿಬಿಎಂಪಿ ಚೆಲ್ಲಾಟವಾಡುತ್ತಿದೆ. ಯಶವಂತಪುರವನ್ನು ಕಸವಂತಪುರವನ್ನಾಗಿ ಮಾಡುತ್ತಿರುವುದು ಖಂಡನೀಯ” ಎಂದು ಹೇಳಿದರು.

“ಬೆಂಗಳೂರಿನ ಹಲವು ಭಾಗಗಳ ಕಸವನ್ನು ಲಿಂಗಧೀರನಹಳ್ಳಿಯಲ್ಲಿ ಸುರಿಯುತ್ತಿರುವುದರಿಂದ ಇಲ್ಲಿ ನೊಣಗಳ ಕಾಟ ವಿಪರೀತವಾಗಿದೆ. ಅಡುಗೆಗೂ ನೊಣಗಳು ಬಂದು ಬೀಳುವಷ್ಟು ದೊಡ್ಡ ಪ್ರಮಾಣದಲ್ಲಿ ಸಮಸ್ಯೆ ಎದುರಾಗಿದೆ. ಸಣ್ಣ ಗಾಳಿ ಬೀಸಿದರೂ ಊರ ತುಂಬಾ ಕೆಟ್ಟ ವಾಸನೆ ಬರುತ್ತಿದೆ. ಎಲ್ಲರಂತೆ ಇಲ್ಲಿನ ಜನರು ಕೂಡ ಸರ್ಕಾರಕ್ಕೆ ನಾನಾ ರೀತಿಯ ತೆರಿಗೆಗಳನ್ನು ಕಟ್ಟುತ್ತಾರೆ. ಅದಕ್ಕೆ ಪ್ರತಿಯಾಗಿ ಸರ್ಕಾರವು ಇಂತಹ ಕೆಟ್ಟ ವಾತಾವರಣವನ್ನು ನಿರ್ಮಿಸಿಕೊಟ್ಟಿರುವುದು ದುರಂತ. ಶೀಘ್ರವೇ ಈ ಘಟಕವನ್ನು ಯಾವುದಾದರೂ ನಿರ್ಜನ ಪ್ರದೇಶಕ್ಕೆ ಸ್ಥಳಾಂತರ ಮಾಡಬೇಕು” ಎಂದು ಶಶಿಧರ ಆರಾಧ್ಯ ಆಗ್ರಹಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ