ನಾರಾಯಣಗುರು ಅಭಿವೃದ್ಧಿ ನಿಗಮ ಘೋಷಣೆ ಬಗ್ಗೆ ಬಿಲ್ಲವ ಮುಖಂಡ ಸತ್ಯಜಿತ್ ಸುರತ್ಕಲ್ ಪ್ರತಿಕ್ರಿಯೆ - Mahanayaka
5:41 PM Saturday 24 - January 2026

ನಾರಾಯಣಗುರು ಅಭಿವೃದ್ಧಿ ನಿಗಮ ಘೋಷಣೆ ಬಗ್ಗೆ ಬಿಲ್ಲವ ಮುಖಂಡ ಸತ್ಯಜಿತ್ ಸುರತ್ಕಲ್ ಪ್ರತಿಕ್ರಿಯೆ

sathyajith surathkal
22/02/2023

ಚುನಾವಣೆಗೆ ಎರಡು ತಿಂಗಳು ಇರುವಾಗ ನಾರಾಯಣಗುರು ಅಭಿವೃದ್ಧಿ ನಿಗಮ ಘೋಷಣೆ ಮಾಡಿದ್ದಾರೆ. ಈಗಲಾದರೂ ಮಾಡಿದ್ದಕ್ಕೆ ರಾಜ್ಯ ಸರ್ಕಾರ ಮತ್ತು ಇದಕ್ಕಾಗಿ ಹೋರಾಟ ಮಾಡಿದವರಿಗೆ ಅಭಿನಂದನೆ ಹೇಳುತ್ತೇವೆ. ಆದರೆ ಈ ಹೊತ್ತಿನಲ್ಲಿ ಅಭಿವೃದ್ಧಿ ನಿಗಮ ಘೋಷಿಸಿ ಇದರ ಲಾಭ ಈಗ ಸಮುದಾಯಕ್ಕೆ ಸಿಗಲು ಸಾಧ್ಯವಿಲ್ಲ. ಇದೊಂದು ಚುನಾವಣೆಗೆ ಮೆಟ್ಟಿಲು ಅನ್ನುವ ರೀತಿ ಮಾಡಿದ್ದಾರಷ್ಟೇ ಎಂದು ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ, ಬಿಲ್ಲವ ಮುಖಂಡ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ.

ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ‌ ನಡೆದ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾತನಾಡಿದರು. ಇನ್ನೇನು ಒಂದು ತಿಂಗಳಲ್ಲಿ ಚುನಾವಣೆ ಘೋಷಣೆಯಾಗುತ್ತದೆ. ಅದಕ್ಕೂ ಮೊದಲು ನಿಗಮ ಅಸ್ತಿತ್ವಕ್ಕೆ ಬರಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಮೊದಲೇ ಅದಕ್ಕೊಬ್ಬ ಅಧ್ಯಕ್ಷರು, ಸಮಿತಿ ರಚನೆ ಆಗುತ್ತಿದ್ದರೆ ಕೆಲಸ ಆರಂಭ ಆಗುತ್ತಿತ್ತು. ಬಜೆಟ್ ನಲ್ಲಿ ಒಂದಷ್ಟು ಅನುದಾನ ಘೋಷಿಸಿದ್ದರೆ ಲಾಭ ಇರುತ್ತಿತ್ತು. ಬಜೆಟ್ ಜಾರಿಗೆ ಬರುವುದೂ ಎಪ್ರಿಲ್ ನಂತರ. ಆದರೆ ಮಾರ್ಚ್ ಕೊನೆಯಲ್ಲಿ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇರುವುದರಿಂದ ಬಜೆಟ್ ಘೋಷಣೆ ಅನುಷ್ಠಾನ ಸಾಧ್ಯವಿಲ್ಲ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ