ಶುಕ್ರವಾರದಿಂದ ಮುಖ್ಯಮಂತ್ರಿ ಚಂದ್ರು ರಾಜ್ಯ ಪ್ರವಾಸ - Mahanayaka

ಶುಕ್ರವಾರದಿಂದ ಮುಖ್ಯಮಂತ್ರಿ ಚಂದ್ರು ರಾಜ್ಯ ಪ್ರವಾಸ

mukhyamanthri chandru
22/02/2023


Provided by

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರಾದ ಡಾ.ಮುಖ್ಯಮಂತ್ರಿ ಚಂದ್ರುರವರು ಹೊಸಪೇಟೆ, ಕೊಪ್ಪಳ, ಗದಗ, ಹರಿಹರ, ಕನಕಗಿರಿ, ದಾವಣಗೆರೆ ಹಾಗೂ ತುಮಕೂರಿಗೆ ಪ್ರವಾಸ ಹಮ್ಮಿಕೊಂಡಿದ್ದಾರೆ.

“ಫೆಬ್ರವರಿ 24ರ ಶುಕ್ರವಾರದಂದು ಬೆಂಗಳೂರಿನ ಹೊರಟು, 25ರ ಶನಿವಾರ ಬೆಳಗ್ಗೆ 9.30ಕ್ಕೆ ಹೊಸಪೇಟೆಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ, ಮಧ್ಯಾಹ್ನ 2 ಗಂಟೆಗೆ ಗದಗ ನಗರದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಂತರ ಶ್ರೀ ಪುಟ್ಟರಾಜ ಗವಾಯಿಗಳ ಮಠ ಹಾಗೂ ಶ್ರೀ ತೋಂಟದಾರ್ಯ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಹರಿಹರ ಹಾಗೂ ಕನಕಗಿರಿ ಪೀಠಕ್ಕೆ ಭೇಟಿ ನೀಡಲಾಗುತ್ತದೆ” ಎಂದು ಪಕ್ಷವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

“ಮುಖ್ಯಮಂತ್ರಿ ಚಂದ್ರುರವರು ಫೆಬ್ರವರಿ 26ರ ಭಾನುವಾರದಂದು ಬೆಳಗ್ಗೆ 10 ಗಂಟೆಗೆ ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಂತರ 11 ಗಂಟೆಗೆ ವಾಲ್ಮೀಕಿ ಸಮಾಜದ ನಾಯಕರೊಂದಿಗೆ ಸಭೆ ನಡೆಸಿ, ಮಧ್ಯಾಹ್ನ 3 ಗಂಟೆಗೆ ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಅದೇ ದಿನ ಬೆಂಗಳೂರಿಗೆ ಹಿಂದಿರುಗಲಿದ್ದಾರೆ” ಎಂದು ಆಮ್‌ ಆದ್ಮಿ ಪಾರ್ಟಿ ತಿಳಿಸಿದೆ.

ಮಾರ್ಚ್‌ 4ರಂದು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ರವರು ದಾವಣಗೆರೆಗೆ ಆಗಮಿಸುತ್ತಿದ್ದು, ಬೃಹತ್‌ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಅಂದಿನ ಸಮಾವೇಶಕ್ಕೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಆಮ್‌ ಆದ್ಮಿ ಪಾರ್ಟಿಯು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ