ಕೇಂದ್ರ ಸಚಿವ ಸದಾನಂದ ಗೌಡ ಆರೋಗ್ಯದಲ್ಲಿ ಏರುಪೇರು | ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಘಟನೆ - Mahanayaka

ಕೇಂದ್ರ ಸಚಿವ ಸದಾನಂದ ಗೌಡ ಆರೋಗ್ಯದಲ್ಲಿ ಏರುಪೇರು | ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಘಟನೆ

03/01/2021


Provided by

ಚಿತ್ರದುರ್ಗ:  ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ  ಆರೋಗ್ಯದಲ್ಲಿ ಏರುಪೇರಾಗಿದ್ದು, ಕಾರ್ಯಕ್ರಮದ ಹಿನ್ನೆಲೆಯಲ್ಲಿ ಚಿತ್ರದುರ್ಗಕ್ಕೆ ತೆರಳಿದ್ದ ಅವರು ಅಸ್ವಸ್ಥರಾಗಿದ್ದು, ತಕ್ಷಣವೇ ಅವರನ್ನು  ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿಗಳ ಪ್ರಕಾರ ಸದಾನಂದ ಗೌಡರಿಗೆ ಶುಗರ್ ಲೋ ಆಗಿದೆ ಎಂದು ಹೇಳಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಾಗಿದೆ.

ಇನ್ನೂ ಸದ್ಯ ಅವರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ. ಆದರೆ, ಸ್ಪಷ್ಟ ಮಾಹಿತಿ ಇನ್ನೂ ಲಭಿಸಿಲ್ಲ. ಇನ್ನಷ್ಟು ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ