ಪ್ರಧಾನಿ ಮೋದಿ ಆಗಮನ ಹಿನ್ನೆಲೆ: ವಾಹನ ಸಂಚಾರ ಮಾರ್ಗ ಬದಲಾವಣೆ: ಇಲ್ಲಿದೆ ವಿವರ - Mahanayaka
10:59 AM Saturday 23 - August 2025

ಪ್ರಧಾನಿ ಮೋದಿ ಆಗಮನ ಹಿನ್ನೆಲೆ: ವಾಹನ ಸಂಚಾರ ಮಾರ್ಗ ಬದಲಾವಣೆ: ಇಲ್ಲಿದೆ ವಿವರ

pm narendra modi
08/03/2023


Provided by

ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು — ಮೈಸೂರು ರಾಷ್ಟ್ರೀಯ ದಶಪಥ ರಸ್ತೆ ಉದ್ಘಾಟನೆ ಕಾರ್ಯಕ್ರಮಕ್ಕೆ   ಮಾರ್ಚ್ 12 ರಂದು ಆಗಮಿಸುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಮಾರ್ಚ್ 12 ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳನ್ನು ಈ ಕೆಳಕಂಡಂತೆ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ.

ಮೈಸೂರು ನಗರದಿಂದ ಬೆಂಗಳೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳು ಮೈಸೂರು — ಬನ್ನೂರು–ಕಿರುಗಾವಲು– ಮಳವಳ್ಳಿ– ಹಲಗೂರು–ಕನಕಪುರ– ಬೆಂಗಳೂರು ಮಾರ್ಗವಾಗಿ ಸಂಚರಿಸುವುದು.

ಮೈಸೂರು ನಗರದಿಂದ ತುಮಕೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳು ಮೈಸೂರು-ಶ್ರೀರಂಗಪಟ್ಟಣ– ಪಾಂಡವಪುರ–ನಾಗಮಂಗಲ–ಬೆಳ್ಳೂರು ಕ್ರಾಸ್ — ತುಮಕೂರು ಮಾರ್ಗವಾಗಿ ಸಂಚರಿಸುವುದು.

ತುಮಕೂರಿನಿಂದ ಮೈಸೂರಿಗೆ ಮದ್ದೂರು ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳು ತುಮಕೂರು–ಬೆಳ್ಳೂರುಕ್ರಾಸ್– ನಾಗಮಂಗಲ–ಪಾಂಡವಪುರ– ಶ್ರೀರಂಗಪಟ್ಟಣ ಮೈಸೂರು ಮಾರ್ಗವಾಗಿ ಸಂಚರಿಸುವುದು.

ಬೆಂಗಳೂರಿನಿಂದ ಮೈಸೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳು ಬೆಂಗಳೂರು–ಚೆನ್ನಪಟ್ಟಣ–ಹಲಗೂರು–ಮಳವಳ್ಳಿ–ಕಿರುಗಾವಲು–ಬನ್ನೂರು — ಮೈಸೂರು ಮಾರ್ಗವಾಗಿ ಸಂಚರಿಸುವುದು.

ಬೆಂಗಳೂರಿನಿಂದ ಮದ್ದೂರು ಮಾರ್ಗವಾಗಿ ಕೊಳ್ಳೇಗಾಲ–ಮಹದೇಶ್ವರ ಬೆಟ್ಟಕ್ಕೆ ತೆರಳುವ ಎಲ್ಲಾ ರೀತಿಯ ವಾಹನಗಳು ಬೆಂಗಳೂರು–ಚನ್ನಪಟ್ಟಣ- ಹಲಗೂರು–ಮಳವಳ್ಳಿ–ಕೊಳ್ಳೇಗಾಲ– ಮಹದೇಶ್ವರ ಬೆಟ್ಟ ಮಾರ್ಗವಾಗಿ ಸಂಚರಿಸುವುದು.

ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಿದೆ. ತಪ್ಪಿದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ  ಕ್ರಮವಹಿಸಲಾಗುವುದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ