ಎದೆನೋವಿನ ಹಿನ್ನೆಲೆ ಶಾಸಕ ಎನ್.ಮಹೇಶ್ ಆಸ್ಪತ್ರೆಗೆ ದಾಖಲು - Mahanayaka
5:00 AM Saturday 18 - October 2025

ಎದೆನೋವಿನ ಹಿನ್ನೆಲೆ ಶಾಸಕ ಎನ್.ಮಹೇಶ್ ಆಸ್ಪತ್ರೆಗೆ ದಾಖಲು

n mahesh
12/03/2023

ಚಾಮರಾಜನಗರ: ಕೊಳ್ಳೇಗಾಲ ಶಾಸಕ‌ ಎನ್.‌ಮಹೇಶ್ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


Provided by

ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಮಹೇಶ್ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದರಿಂದ ಮೈಸೂರಿನ‌ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಆ್ಯಂಜಿಯೋಗ್ರಾಂ‌ ಮಾಡಲಾಗಿದೆ ಎಂದು ತಿಳಿದುಬಂದಿದೆ.

1 ದಿನ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ‌ ಕೊಟ್ಟಿದ್ದು ಸದ್ಯ ಮಹೇಶ್ ಆಸ್ಪತ್ರೆಯಲ್ಲೇ ಇದ್ದಾರೆ. ಇನ್ನು, ಈ ಸಂಬಂಧ ಶಾಸಕ‌ ಮಹೇಶ್ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು “ನನಗೆ ಏನು ತೊಂದರೆ ಇಲ್ಲ, ದಯಮಾಡಿ ಯಾರು ಆಸ್ಪತ್ರೆ ಕಡೆಗೆ ಬರೋದಕ್ಕೆ ಹೋಗ್ಬೇಡಿ, ಅದರಿಂದ ಬೇರೆ ರೋಗಿಗಳಿಗೆ ತೊಂದರೆಯಾಗುತ್ತದೆ. ನಾಳೆ ನಿಮ್ಮನ್ನು ಭೇಟಿ ಮಾಡ್ತೀನಿ ಎಂದು ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ