ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಲ್ಲಿ ಉತ್ತಮ ಚಿತ್ರಗಳ ಆಯ್ಕೆ: ಬಸವರಾಜ ಬೊಮ್ಮಾಯಿ‌ - Mahanayaka
1:01 PM Saturday 12 - September 2026

ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಲ್ಲಿ ಉತ್ತಮ ಚಿತ್ರಗಳ ಆಯ್ಕೆ: ಬಸವರಾಜ ಬೊಮ್ಮಾಯಿ‌

basavaraj bomayi
24/03/2023

ಬೆಂಗಳೂರು: ಈ ಬಾರಿಯ ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಈ ಬಾರಿ ಉತ್ತಮ ಚಿತ್ರಗಳನ್ನು ಆಯ್ಕೆ ಮಾಡಲಾಗಿದೆ. . ಈ ಸಿನೆಮಾಗಳು ನಮ್ಮ ಚಿತ್ರಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.

ಇಂದು ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಬಳಿ 14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬೆಂಗಳೂರು ಅಂತರಾಷ್ಟ್ರೀಯ ನಗರ. ಪ್ರತಿದಿನ ಐದು ಸಾವಿರಕ್ಕೂ ಹೆಚ್ಚು ಜನ ವಿಜ್ಞಾನಿಗಳು ಬರುತ್ತಾರೆ‌. 400 ಆರ್ ಆ್ಯಂಡ್ ಡಿ ಕೇಂದ್ರಗಳಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಬೆಳೆದಿದೆ‌. ಇಲ್ಲಿ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಡೆಯದೆ ಇನ್ನೆಲ್ಲಿ ನಡೆಯುತ್ತದೆ.

ಸಿನೆಮಾಗೆ ಬಹಳ ದೊಡ್ಡ ಇತಿಹಾಸ ಇದೆ. ಅತ್ಯಂತ ಅದ್ಬುತವಾದ ತಂತ್ರಜ್ಞಾನ ಬಳಕೆಯಾಗುತ್ತಿದೆ. ಡಿಜಿಟಲೀಕರಣ ಆದ ಮೇಲೆ ಬಹಳಷ್ಟು ಬದಲಾವಣೆ ಆಗಿದೆ. ನಾವು ನೋಡುವುದಕ್ಕೂ, ನಮ್ಮ ಮಕ್ಕಳು ಸಿನೆಮಾ ನೋಡುವುದಕ್ಕು ವ್ಯತ್ಯಾಸ ಇದೆ. ಬದುಕಿನಲ್ಲಿ ಎಲ್ಲವೂ ವೇಗವಾಗಿ ಬೆಳೆಯುತ್ತಿರುವುದರಿಂದ ಸಿನೆಮಾದಲ್ಲಿಯೂ ವೇಗವಾಗಿ ಬೆಳವಣಿಗೆ ಆಗುತ್ತಿದೆ. ಈಗ ತಂತ್ರಜ್ಞಾನದ ಮೂಲಕ ಹೋದರೆ ಯಶಸ್ಸು ಸಿಗುತ್ತದೆ ಎಂದರು.

ಕಾಂತಾರ ಬಗ್ಗೆ ಯಾರು ನಿರೀಕ್ಷೆ ಮಾಡಿರಲಿಲ್ಲ. ಕಾಂತಾರ ಸ್ಥಳೀಯ ಸಂಸ್ಕೃತಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗದುಕೊಂಡು ಹೋಗಿದ್ದು, ಆ ತಂಡಕ್ಕೆ ಅಭಿನಂದನೆಗಳು.ತ್ರಿಬಲ್ ಆರ್ ಸಿನೆಮಾ ಆಸ್ಕರ್ ಪಡೆದಿದ್ದು ನಾವೆಲ್ಲ ಹೆಮ್ಮೆ ಪಡಬೇಕು‌. ಈ ವರ್ಷ ಫೆಸ್ಟಿವಲ್ ನಲ್ಲಿ ಉತ್ತಮ ಸಿನೆಮಾಗಳನ್ನು ಆಯ್ಕೆ ಮಾಡಿದ್ದಾರೆ. ಸಿನೆಮಾಗಳು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತದೆ ಎಂದರು.

ಸಿನೆಮಾ ಇಲ್ಲದೆ ನಮ್ಮ ಬದುಕಿಲ್ಲ. ಹೀಗಾಗಿ ಸಿನೆಮಾಗಾಗಿ ನಾನು ಏನೆಲ್ಲ ಬೇಕು, ಅದನ್ನು ಮಾಡಿದ್ದೇನೆ. ಸಿನೆಮಾ ಸಬ್ಸಿಡಿ ಹೆಚ್ಚಿಗೆ ಮಾಡಿದ್ದೇನೆ. ಸಬ್ಸಿಡಿ ಪಡೆಯುವ ಚಿತ್ರಗಳ ಸಂಖ್ಯೆ ಹೆಚ್ಚಳ ಮಾಡಿದ್ದೇನೆ. ಫಿಲ್ಮ್‌ ಸಿಟಿ ಕೂಡ ಆಗಲಿದೆ. ಅಲ್ಲಿ ಹಾಲಿವುಡ್ ಚಿತ್ರಗಳೂ ಶೂಟಿಂಗ್ ಆಗಬೇಕು ಎಂದರು.

ಪುನೀತ್ ಸಮಾಧಿ ಅಭಿವೃದ್ಧಿ; ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರು

ನಾವು ಈಗಾಗಲೇ ಪವರ್ ಸ್ಟಾರ್ ಪುನೀತ ರಾಜಕುಮಾರ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದೇವೆ. ಅವರ ಹೆಸರಿನಲ್ಲಿ ಸ್ಮಾರಕ ಮಾಡಲು ಎಲ್ಲ ಸಿದ್ಧತೆ ನಡೆದಿದೆ. ಇದೇ ವರ್ಷ ನಟ ದಿ.ಪುನಿತ್ ರಾಜಕುಮಾರ್ ಅವರ ಸ್ಮಾರಕ ಅಭಿವೃದ್ಧಿ ಮಾಡುತ್ತೇವೆ. ಇದರ ಜೊತೆಗೆ ಅಂಬರೀಶ್ ಅವರ ಸ್ಮಾರಕ ಸಿದ್ದವಾಗುತ್ತಿದೆ. ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡಲು ತೀರ್ಮಾನಿಸಲಾಗಿದೆ. ಮಾರ್ಚ್ 27 ರಂದು ಸ್ಮಾರಕ ಹಾಗೂ ಹೆಸರಿಡುವ ಕಾರ್ಯಕ್ರಮ ಮಾಡುತ್ತೇವೆ ಎಂದರು.

ಈ ಸಂದರ್ಭಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಂಸದ ರಾಜೀವ್ ಚಂದ್ರಶೇಖರ್, ಸಚಿವ ಆರ್. ಅಶೋಕ್ ಹಾಗೂ ಬಾಲಿವುಡ್ ನಿರ್ದೇಶಕ, ಸಿನಿಮಾಟೋಗ್ರಾಫರ್ ಗೋವಿಂದ್ ನಿಹಾಲಾನಿ, ನಟಿ ರಮ್ಯಾ ಕೃಷ್ಣ, ಅಭಿಷೇಕ್ ಅಂಬರೀಶ್, ಸಪ್ತಮಿ ಗೌಡ, ಹರ್ಷಿಕಾ, ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ.ಮಾ ಹರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler