ಕಾಲುವೆಗೆ ಉರುಳಿ ಬಿದ್ದ ಕಾರು: 7 ಜನರ ದಾರುಣ ಸಾವು
ಒಡಿಶಾ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಘಟನೆ ಶುಕ್ರವಾರ ಮುಂಜಾನೆ ಒಡಿಶಾದ ಸಂಬಲ್ ಪುರ ಎಂಬಲ್ಲಿ ನಡೆದಿದ್ದು, ಅಪಘಾತದಲ್ಲಿ 7 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಬೆಳಗ್ಗಿನ ಜಾವ 2 ಗಂಟೆಯ ವೇಳೆ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದವರು ಪರಮನ್ ಪುರದಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ಮರಳುತ್ತಿದ್ದರು. ಈ ವೇಳೆ ಒಡಿಶಾದ ಸಂಬಲ್ ಪುರ ಜಿಲ್ಲೆಯ ಪರಮನ್ ಪುರ ಬಳಿ ಘಾಮ್ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಓರ್ವ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಸಂಬಲ್‌ಪುರ ಜಿಲ್ಲಾಧಿಕಾರಿ ಅನನ್ಯ ದಾಸ್ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























