ರಾಮನವಮಿ ವೇಳೆ ವಿದ್ಯುತ್ ಸ್ಪರ್ಶ: ಮೂವರ ದಾರುಣ ಸಾವು, ಮೂವರ ಸ್ಥಿತಿ ಚಿಂತಾಜನಕ
ರಾಜಸ್ಥಾನ: ರಾಮನವಮಿ ಆಚರಣೆ ವೇಳೆ ಮೂವರು ವ್ಯಕ್ತಿಗಳು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ಗುರುವಾರ ನಡೆದಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ.
ಅಭಿಷೇಕ್(24), ಮಹೇಂದ್ರ ಯಾದವ್(40) ಹಾಗೂ ಲಲಿತ್ ಪ್ರಜಾಪತ್(25) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ಒಟ್ಟು 7 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಮೂವರು ಮೃತಪಟ್ಟಿದ್ದಾರೆ.
ರಾಮನವಮಿ ಆಚರಣೆಯ ವೇಳೆ ಯಾವುದೇ ಸುರಕ್ಷಿತ ಕ್ರಮಗಳನ್ನು ಆಯೋಜಕರು ಕೈಗೊಳ್ಳದ ಹಿನ್ನೆಲೆಯಲ್ಲಿ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತರ ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























