ಬಂಡೀಪುರಕ್ಕೆ ಮೋದಿ ಭೇಟಿ ಸಾಧ್ಯತೆ: ಸಫಾರಿ ನಡೆಸ್ತಾರಂತೆ ಪಿಎಂ
ಚಾಮರಾಜನಗರ: ಇದೇ ಏ.9 ರಂದು ಮೈಸೂರಿನಲ್ಲಿ ಪ್ರಾಜೆಕ್ಟ್ ಟೈಗರ್ ಸುವರ್ಣ ಮಹೋತ್ಸವ ಕಾರ್ಯಕ್ರಮ ಮುಗಿಸಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕೊಡಲಿರುವ ಸಾಧ್ಯತೆ ಇದೆ.
ಇದೇ,1973 ರಲ್ಲಿ ಪ್ರಾಜೆಕ್ಟ್ ಟೈಗರ್ ಘೋಷಿಸಿದ ವೇಳೆ ಅದರಲ್ಲಿ ಬಂಡೀಪುರವೂ ಒಂದಾಗಿತ್ತು. ಜೊತೆಗೆ, ಕರ್ನಾಟಕದಲ್ಲೇ ಅತೀ ಹೆಚ್ಚು ಹುಲಿಗಳಿರುವ ಸಂರಕ್ಷಿತ ಪ್ರದೇಶವೂ ಇದಾಗಿರುವ ಹಿನ್ನೆಲೆಯಲ್ಲಿ ಅಷ್ಟೇ ಅಲ್ಲದೇ, ಕೆಲ ದಿನಗಳ ಹಿಂದೆಯಷ್ಟೇ ಆನೆ ಬದುಕಿಸಿದ್ದ ಅರಣ್ಯಾಧಿಕರಿಗಳ ಕ್ರಮವನ್ನು ಮೋದಿ ಶ್ಲಾಘಿಸಿದ್ದರು ಆದ್ದರಿಂದ ಬಂಡೀಪುರಕ್ಕೆ ಮೋದಿ ಭೇಟಿ ಕೊಡುವ ಸಾಧ್ಯತೆ ಹೆಚ್ಚಾಗಿದೆ.
ಮೈಸೂರಿನಿಂದ ಕಾರ್ಯಕ್ರಮ ಮುಗಿಸಿ ನೇರವಾಗಿ ಬಂಡೀಪುರಕ್ಕೆ ನರೇಂದ್ರ ಮೋದಿ ಬಂದಿಳಿಯಲಿದ್ದು ಸಫಾರಿ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ, ಅರಣ್ಯ ಇಲಾಖೆಯೂ ಸಾಕಷ್ಟು ತಯಾರಿಯನ್ನು ನಡೆಸುತ್ತಿದ್ದು ಬಂಡೀಪುರ ಹೋಗುವ ಮಾರ್ಗ ಮಧ್ಯೆಯ ಸಫಾರಿ ಕೇಂದ್ರದ ಬಳಿ ಹೆಲಿಪ್ಯಾಡ್ ವ್ಯವಸ್ಥೆಯನ್ನು ಮಾಡುತ್ತಿದೆ, ರಸ್ತೆಗಳನ್ನು ದುರಸ್ತಿ ಮಾಡಲಾಗುತ್ತಿದೆ.
ಈ ಕುರಿತು ಬಂಡೀಪುರ ಸಿಎಫ್ಒ ರಮೇಶ್ ಕುಮಾರ್ ಪ್ರತಿಕ್ರಿಯಿಸಿ, ಮೋದಿ ಅವರು ಬಂಡೀಪುರಕ್ಕೆ ಭೇಟಿ ಕೊಡುವ ಸಾಧ್ಯತೆ ಇರುವುದರಿಂದ ನಾವು ತಯಾರಿ ಮಾಡಿಕೊಳ್ಳುತ್ತಿದ್ದೇವೆ, ಆನೆ ಉಳಿಸಿದ ಸಿಬ್ಬಂದಿಗೆ ಸ್ಮರಣಿಕೆ ಕೊಡುವುದು ಜೊತೆಗೆ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಯೋಜಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ತಮಿಳುನಾಡಿನ ಮಧುಮಲೈ ಹಾಗೂ ಕೇರಳದ ವೈನಾಡು ಅರಣ್ಯ ಪ್ರದೇಶದ ಗಡಿ ಹೊಂದಿದ್ದು 1973 ರಲ್ಲಿ ಹುಲಿ ಯೋಜನೆ ಘೋಷಿಸಿದ ವೇಳೆ ಕೇವಲ 10-15 ಹುಲಿಗಳಿದ್ದವು ಈಗ ಅವುಗಳ ಸಂಖ್ಯೆ 150 ದಾಟಿದೆ ಎಂಬ ಮಾಹಿತಿ ಇದೆ.ಒಟ್ಟಿನಲ್ಲಿ ದೇಶದ ಪ್ರಧಾನಿಯೊಬ್ಬರು ಕರ್ನಾಟಕದ ಅರಣ್ಯ ಪ್ರದೇಶದಲ್ಲಿ ಸಫಾರಿ ನಡೆಸುವುದು ಒಂದು ಅವಿಸ್ಮರಣೀಯ ಕ್ಷಣವಾಗಲಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























