ಶೇಕಡಾ 100ರಷ್ಟು ಮತದಾನ ನಡೆಯಲು ಸಹಕರಿಸಿ: ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಕರೆ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣಾ ಮತದಾನದಲ್ಲಿ ಜಿಲ್ಲೆಯ ಎಲ್ಲಾ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಶೇಕಡಾ 100ರಷ್ಟು ಮತದಾನ ನಡೆಯಲು ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಕರೆ ನೀಡಿದರು.
ಅವರು ಏ.3ರ ಸೋಮವಾರ ನಗರದ ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಸ್ ಸಭಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಸಂತ ಅಲೋಶಿಯಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾದ ಮತದಾನ ಜಾಗೃತಿಯ ವ್ಯಂಗ್ಯ ಚಿತ್ರಗಳ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.
18 ವರ್ಷ ಪೂರೈಸಿದ ಎಲ್ಲರಿಗೂ ಭಾರತೀಯ ಸಂವಿಧಾನ ನೀಡಿರುವ ಅದ್ಭುತ ಶಕ್ತಿ ಮತ ಚಲಾವಣೆಯ ಹಕ್ಕು. ಅದನ್ನು ಮೇ 10.ರಂದು ನಡೆಯಲಿರುವ ಚುನಾವಣೆಯಲ್ಲಿ ಚಲಾಯಿಸುವ ಮೂಲಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತಗಳಲ್ಲೂ ತಮ್ಮ ಇಚ್ಛೆಯ ಶಾಸಕರನ್ನು ಆಯ್ಕೆ ಮಾಡುವಂತೆ ತಿಳಿಸಿದರು.
ಮತದಾನ ನನ್ನ ಹಕ್ಕು ಎಂಬ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರತಿಯೊಬ್ಬ ಮತದಾರನೂ ಮತಗಟ್ಟೆಗೆ ಬಂದು ತಮ್ಮ ಮತಚಲಾಯಿಸುವ ಮೂಲಕ ಸಂವಿಧಾನವನ್ನು ಎತ್ತಿ ಹಿಡಿಯಬೇಕು ಎಂದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ, ಸಂತ ಅಲೋಷಿಯಸ್ ಕಾಲೇಜಿನ ಪ್ರಾಂಶುಪಾಲ ರೆ.ಡಾ. ಪ್ರವೀಣ್ ಮಾರ್ಟಿಸ್, ವ್ಯಂಗ್ಯ ಚಿತ್ರಕಾರ ಜಾನ್ ಚಂದ್ರನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw