ಬೈಕ್ ಗಳಿಗೆ ಪ್ರವಾಸಿ ಬಸ್ ಡಿಕ್ಕಿ: ಓರ್ವ ಸಾವು, ಮತ್ತೋರ್ವನ ಕಾಲು ಕಟ್

ಚಾಮರಾಜನಗರ: ಪ್ರವಾಸಿಗರ ಬಸ್ಸೊಂದು ಬೈಕ್ ಗಳಿಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಇಳಿದ ಭೀಕರ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಅಸ್ಸಿಸಿ ಆಸ್ಪತ್ರೆ ಬಳಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಮಾಡ್ರಹಳ್ಳಿ ಗ್ರಾಮದ ರಾಜು(45) ಎಂಬಾತ ಸ್ಥಳದಲ್ಲೇ ಮೃತಪಟ್ಟ ದುರ್ದೈವಿ. ಗುಂಡ್ಲುಪೇಟೆ ತಾಲೂಕಿನ ಕಿಲಗೆರೆ ಗ್ರಾಮದ ವ್ಯಕ್ತಿಯೋರ್ವನ ಕಾಲು ಸಂಪೂರ್ಣ ತುಂಡಾಗಿದೆ.
ಮಳೆಯ ನಡುವೆ ಅತಿವೇಗವಾಗಿ ಬಸ್ ಬಂದಿತ್ತು. ಇದು ಈ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಅರುಣಾಚಲ ಮೂಲದ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw