ಪ್ರಧಾನಿ ಮೋದಿ ಬಂಡೀಪುರ ಭೇಟಿ: ಎಡಿಜಿಪಿ ಅಲೋಕ್ ಸ್ಥಳ ಪರಿಶೀಲನೆ - Mahanayaka

ಪ್ರಧಾನಿ ಮೋದಿ ಬಂಡೀಪುರ ಭೇಟಿ: ಎಡಿಜಿಪಿ ಅಲೋಕ್ ಸ್ಥಳ ಪರಿಶೀಲನೆ

bandypura
04/04/2023


Provided by

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರ ಬಂಡೀಪುರ ಭೇಟಿಗೆ ದಿನಗಣನೆ ಆರಂಭವಾಗಿದ್ದು, ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಸಕಲ ತಯಾರಿ ನಡೆಸುತ್ತಿದೆ.

ಯಾವುದೇ ಅಹಿತಕರ ಹಾಗೂ ಭದ್ರತಾ ಲೋಪ ಉಂಟಾಗದ ರೀತಿ ಬಿಗಿ ಭದ್ರತೆ  ಕೈಗೊಳ್ಳುವ ಉದ್ದೇಶದಿಂದ ಎಡಿಜಿಪಿ ಅಲೋಕ್ ಕುಮಾರ್ ಅವರಿಂದು ಬಂಡೀಪುರಕ್ಕೆ ಭೇಟಿ ಕೊಟ್ಟು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಬಂಡೀಪುರ ಸಫಾರಿ ಕೇಂದ್ರದ ಸಮೀಪವೇ 3 ಹೆಲಿಪ್ಯಾಡ್ ನಿರ್ಮಾಣಗೊಳ್ಳುತ್ತಿದ್ದು ಸಾರ್ವಜನಿಕರು, ಅಭಿಮಾನಿಗಳನ್ನು ನಿಯಂತ್ರಿಸಲು ಸೂಕ್ತ ಬ್ಯಾರಿಕೇಡ್, ಕಾಂಪೌಂಡ್ ವ್ಯವಸ್ಥೆ ಇರಬೇಕು, ವನ್ಯಜೀವಿಗಳು ರಸ್ತೆ ದಾಟುವುದನ್ನು ನಿಗಾ ಇಡಬೇಕು  ಸೇರಿದಂತೆ ಇತರೆ ಸೂಚನೆಗಳನ್ನು ಐಜಿಪಿ ಮಧುಕರ್ ಪವಾರ್ ಹಾಗೂ ಚಾಮರಾಜನಗರ ಎಸ್ಪಿ ಪದ್ಮಿನಿ ಸಾಹೋ ಅವರಿಗೆ ಕೊಟ್ಟಿದ್ದಾರೆ.

ಏ.9 ರಂದು ಬಂಡೀಪುರಕ್ಕೆ ಬರಲಿರುವ ವಿಶೇಷ ಹೆಲಿಕಾಪ್ಟರ್ ಮೂಲಕ ನರೇಂದ್ರ ಮೋದಿ ಬರಲಿದ್ದು ಸಫಾರಿ, ರಾಂಪುರ ಆನೆ ಶಿಬಿರಕ್ಕೆ ಭೇಟಿ ಕೊಡಲಿದ್ದಾರೆ. ಜೊತೆಗೆ, ಮಾವುತರ ಜೊತೆ ಸಂವಾದ ನಡೆಸಲಿದ್ದು ಅದಾದ ಬಳಿಕ ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶಕ್ಕೆ ತೆರಳುವರು ಎಂದು ತಿಳಿದುಬಂದಿದೆ.

ಮೋದಿ ಅವರ ಅಧಿಕೃತ ಪ್ರವಾಸ ಪಟ್ಟಿ ಇನ್ನೂ ಕೂಡ ಬಿಡುಗಡೆಯಾಗಿಲ್ಲ. ಆದರೆ, ಪ್ರಧಾನಿ ಬಂಡೀಪುರಕ್ಕೆ ಭೇಟಿ ಕೊಡುವ ಸಾಧ್ಯತೆ ತೀರಾ ಹೆಚ್ಚಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ