ಬಿಜೆಪಿಗೆ ಸೇರ್ಪಡೆಯಾಗಲಿದ್ದಾರಾ ನಟ ಕಿಚ್ಚ ಸುದೀಪ್—ದರ್ಶನ್? - Mahanayaka

ಬಿಜೆಪಿಗೆ ಸೇರ್ಪಡೆಯಾಗಲಿದ್ದಾರಾ ನಟ ಕಿಚ್ಚ ಸುದೀಪ್—ದರ್ಶನ್?

darshan
05/04/2023


Provided by

ಬೆಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ನಡುವೆ ಕರ್ನಾಟಕದ ಪ್ರಮುಖ ನಟರಾದ ಕಿಚ್ಚ ಸುದೀಪ್ ಹಾಗೂ ದರ್ಶನ್ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನುವ ಚರ್ಚೆಗಳು ಕೇಳಿ ಬಂದಿವೆ.

ಕಿಚ್ಚ ಸುದೀಪ್ ಹಾಗೂ ದರ್ಶನ್ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವಿಚಾರ ಇಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಚರ್ಚೆಗೀಡಾಗಿದೆ. ಆದರೆ ಈ ಬಗ್ಗೆ ನಟರು ಯಾವುದೇ ಸ್ಪಷ್ಟನೆ ನೀಡಿಲ್ಲ.

ಸಾಕಷ್ಟು ಜನರು ಇದೊಂದು ವದಂತಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಇನ್ನು ಕೆಲವರು ಇಂದು ಸಂಜೆ ಕಿಚ್ಚ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳುತ್ತಿದ್ದಾರೆ. ಜೊತೆಗೆ ಈ ಬಗ್ಗೆ ಇಂದು ಮಧ್ಯಾಹ್ನ ಅವರು ಪತ್ರಿಕಾಗೋಷ್ಠಿ ಕರೆದು ಈ ಬಗ್ಗೆ ಘೋಷಿಸಲಿದ್ದಾರೆ ಎಂಬ ವದಂತಿ ಕೂಡ ಹರಿದಾಡುತ್ತಿದೆ.

ಕಿಚ್ಚ ಸುದೀಪ್ ಹಾಗೂ ದರ್ಶನ್ ಈ ಹಿಂದಿನ ಚುನಾವಣೆಗಳಲ್ಲಿ ಸ್ಟಾರ್ ಪ್ರಚಾರಕರಾಗಿದ್ದರು. ಈ ಬಾರಿ ಕೂಡ ಅವರು ತಮ್ಮ ಜೊತೆಗಾರರ ಪರವಾಗಿ ಪ್ರಚಾರ ಮಾಡಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿ ಸೃಷ್ಟಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ