ನಮ್ಮ ನಾಯಕರಿಗೆ ಕರ್ನಾಟಕದ ಜೊತೆ ಭಾವನಾತ್ಮಕ ಸಂಬಂಧ ಇದೆ: ನಿರ್ಮಲಾ ಸೀತಾರಾಮನ್

ಬೆಂಗಳೂರು: ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಲೋಕಸಭೆಗೆ ಒಂದು ವರ್ಷದ ಅಸಾಂವಿಧಾನಿಕ ವಿಸ್ತರಣೆ ಜೊತೆಗೆ ಸಂವಿಧಾನದ ಮೂಲಭೂತ ವಿಷಯಗಳಿಗೆ ತಿದ್ದುಪಡಿ ಮಾಡಿದ್ದು ಕಾಂಗ್ರೆಸ್ ಪಕ್ಷ ಎಂಬುದು ಕರ್ನಾಟಕ ಮಾತ್ರವಲ್ಲದೆ ದೇಶದ ಜನತೆಗೆ ಗೊತ್ತಿದೆ.
ಬಿಜೆಪಿ ಹುಟ್ಟುವ ಮೊದಲೇ ನಮ್ಮ ನಾಯಕರಿಗೆ ಕರ್ನಾಟಕದ ಜೊತೆ ವಿಶೇಷ ಭಾವನಾತ್ಮಕ ಸಂಬಂಧ ಇದೆ ಎಂದು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದರು.
ಮಲ್ಲೇಶ್ವರದ ಮಾಧ್ಯಮ ಕೇಂದ್ರ “ಗಿರಿಜಾರಾಮ ದೈವಜ್ಞ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿಯಲ್ಲಿ ವಿರೋಧ ಪಕ್ಷಗಳ ಪ್ರಮುಖ ನಾಯಕರನ್ನು ಬಂಧಿಸಿ ಜೈಲಿನಲ್ಲಿಟ್ಟ ಕಾಂಗ್ರೆಸ್ ಪಕ್ಷದ ಈಗಿನ ನಾಯಕರು ವಿವಿಧ ಸಂಸ್ಥೆಗಳ ದುರ್ಬಳಕೆಯ ಆರೋಪ ಮಾಡುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಲೋಕಸಭೆ ಅವಧಿಯನ್ನು ಒಂದು ವರ್ಷ ಅಸಾಂವಿಧಾನಿಕ ರೀತಿಯಲ್ಲಿ ವಿಸ್ತರಣೆ ನೀಡಲಾಗಿತ್ತು. ವಿರೋಧ ಪಕ್ಷಗಳ ಪ್ರಮುಖ ನಾಯಕರು ಜೈಲಿನಲ್ಲಿ ಇರುವಾಗಲೇ ಸಂವಿಧಾನಕ್ಕೆ ತಿದ್ದುಪಡಿಯನ್ನೂ ತರಲಾಗಿತ್ತು. ರಾಜ್ಯಸಭೆ, ಲೋಕಸಭೆಯಲ್ಲಿ ಮೂರನೇ ಎರಡು ಬಹುಮತ ಬೇಕಿದ್ದರೂ ಇದೇ ಅವಧಿಯಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತರಲಾಗಿತ್ತು ಎಂದು ಆಕ್ಷೇಪಿಸಿದರು.
ಬಿಜೆಪಿ ಹುಟ್ಟುವ ಮೊದಲೇ ಪಕ್ಷದ ಮುಖಂಡರು ಬೆಂಗಳೂರಿನ ಜೊತೆ ಭಾವನಾತ್ಮಕ ಸಂಬಂಧ ಹೊಂದಿದ್ದರು. ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆದಾಗ ನಮ್ಮ ಇಬ್ಬರು ಪ್ರಮುಖ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ ಮತ್ತು ಅಡ್ವಾಣಿ ಅವರನ್ನು ಇಲ್ಲಿ ಬಂಧಿಸಲಾಗಿತ್ತು ಎಂದು ಅವರು ಹೇಳಿದರು.
ಚುನಾವಣೆ ಘೋಷಣೆ ಆದ ಬಳಿಕ ನಾನು ಇಲ್ಲಿಗೆ ಮೊದಲ ಬಾರಿಗೆ ಬಂದಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರು 2015ರಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಇಲ್ಲಿನವರೆಗೆ 32 ಬಾರಿ ಕರ್ನಾಟಕಕ್ಕೆ ಭೇಟಿ ಕೊಟ್ಟಿದ್ದಾರೆ. 2023ರಲ್ಲಿ ಈಗಾಗಲೇ 7 ಬಾರಿ ಭೇಟಿ ನೀಡಿದ್ದು, ಇನ್ನು ಕೆಲವೇ ದಿನಗಳಲ್ಲಿ ಅವರು ಮತ್ತೊಮ್ಮೆ ಭೇಟಿ ಕೊಡಲಿದ್ದಾರೆ ಎಂದರು.
ಜಿ 20 ಸಭೆಗಳಲ್ಲಿ ಕೇಂದ್ರ ಬ್ಯಾಂಕ್, ಗವರ್ನರ್ಗಳ ಸಭೆ ಬೆಂಗಳೂರಿನಲ್ಲಿ ನಡೆದಿತ್ತು. ಅಲ್ಲಿ ಐಐಟಿಗಳು, ಸ್ಟಾರ್ಟಪ್ಗಳ ಪ್ರದರ್ಶಿನಿಯನ್ನೂ ಏರ್ಪಡಿಸಲಾಗಿತ್ತು. ಭಾರತೀಯರ ಸಾಮಥ್ರ್ಯ ಅನಾವರಣಕ್ಕೆ ಇದು ಅವಕಾಶ ಮಾಡಿಕೊಟ್ಟಿತ್ತು ಎಂದು ವಿವರಿಸಿದರು.
ಕೇಂದ್ರ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ರಾಜನಾಥ್ ಸಿಂಗ್ ಅವರು ರಾಜ್ಯಕ್ಕೆ ಭೇಟಿ ಕೊಟ್ಟಿದ್ದರು ಎಂದ ಅವರು, ಇಲ್ಲಿನ ವಿಚಾರಗಳಿಗೆ ಅವರು ಆದ್ಯತೆ ನೀಡಿದ್ದನ್ನು ತಿಳಿಸಿದರು. ಎರಡೂ ಕಡೆ ಬಿಜೆಪಿ ಸರಕಾರ ಇರುವ ಕಾರಣ ಹೀಗೆ ಭೇಟಿ ನೀಡುತ್ತಿದ್ದಾರೆ ಎಂದು ಭಾವಿಸಬಹುದು ಎಂದು ತಿಳಿಸಿದ ಅವರು, ಬಿಜೆಪಿ ಮತ್ತು ಕರ್ನಾಟಕಕ್ಕೆ ಅವಿನಾಭಾವ ಸಂಬಂಧ ಇದೆ ಎಂದು ತಿಳಿಸಿದರು.ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್, ಮುಖ್ಯ ವಕ್ತಾರ ಎಂ.ಜಿ.ಮಹೇಶ್ ಅವರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw